ಬೈಕ್ ಅಪಘಾತ ಓರ್ವ ಸಾವು – ಮತ್ತೊಬ್ಬನಿಗೆ ಗಂಭೀರ ಗಾಯ..!
ಹನೂರು : ತಾಲೂಕಿನ ಪ್ರಸಿದ್ಧ ಯಾತ್ರಸ್ಥಳವಾದ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯಲ್ಲಿ ಆಗಾಗ್ಗೆ ಅಪಘಾತಗಳಲ್ಲಿ ಜರುಗುತ್ತಿದ್ದೂ ಸಾವು ನೋವುಗಳು ಸಂಭವಿಸುತ್ತಿದೆ.
ಹನೂರು ಪಟ್ಟಣದಿಂದ ಮಹದೇಶ್ವರಬೆಟ್ಟಕ್ಕೆ ದಿನ ನಿತ್ಯ ನೂರಾರು ವಾಹನಗಳು ಸಂಚರಿಸಲಿವೆ. ಈ ರಸ್ತೆಯಲ್ಲಿ ಕಿರು ಸೇತುವೆ ಕಾಮಗಾರಿ ಆರಂಭಗೊಂಡಿದ್ದು ಕೆಲವು ಪೂರ್ಣ ಕೆಲ ಇನ್ನು ಕೆಲವು ಕಾಮಗಾರಿ ಮಂದಗತಿಲ್ಲಿ ಸಾಗುತ್ತಿದೆ.
ನಿರ್ಮಾಣವಾದ ಕಿರು ಸೇತುವೆಯಲ್ಲಿ ಮುಕ್ತ ಸಂಚಾರಕ್ಕೆ ಸಮರ್ಪಕವಾಗಿ ವ್ಯವಸ್ಥೆ ಮಾಡದ ಹಿನ್ನೆಲೆ ಹಾಗಾಗ ದ್ವಿಚಕ್ರ ವಾಹನ ಸೇರಿದಂತೆ ಭಾರಿ ವಾಹನಗಳ ನಡುವೆ ಅಪಘಾತವು ಜರುಗುತ್ತಿದ್ದು ಈ ರಸ್ತೆಯು ಅಪಘಾತ ವಲಯಕ್ಕೆ ಕಾರಣವಾಗಿದೆ ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ವಾಹನ ಸಂಚಾರಕ್ಕೆ ಅಡಚಣೆ ಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಪ್ರಜ್ಞಾವಂತ ನಾಗರಿಕರು ಹಾಗೂ ವಾಹನ ಸವಾರರು ಒತ್ತಾಯಿಸಿದ್ದಾರೆ.
ಹನೂರಿನಿಂದ ಮಲೆ ಮಹದೇಶ್ವರ ಬೆಟ್ಟದ ವರೆಗೂ ರಸ್ತೆಯಲ್ಲಿ ತುಂಬಾ ಗುಂಡಿಗಳಿಂದ ಹಾಳಾಗಿದ್ದು ಮಹದೇಶ್ವರ ಬೆಟ್ಟಕ್ಕೆ ತೆರಳುವ ಭಕ್ತಾದಿಗಳು ಆಗಾಗ ಅಪಘಾತಗಳು ಸಂಭವಿಸಿ ಸಾವನಪ್ಪಿರುವ ಘಟನೆಗಳು ಜರುಗುತ್ತಿವೆ. ಈ ಸಂಬಂಧ ಯಾವ ಜನಪ್ರತಿನಿಧಿಗಳು ಹಾಗೂ ಅಧಿಕಾರಗಳು ಕ್ರಮವಿಗೊಳ್ಳುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದರು
ಓರ್ವ ಸಾವು : ಬೆಂಗಳೂರು ಮೂಲದ ಇಬ್ಬರು ಯುವಕರು ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಪಟ್ಟಣದ ಹೊರ ವಲಯದಲ್ಲಿ ಕಿರು ಸೇತುವೆ ಹತ್ತಿರ ಬೈಕ್ ಸವಾರನ ನಿಯಂತ್ರಣ ತಪ್ಪಿ ಅಪಘಾತವಾಗಿದ್ದು ಇದರಲ್ಲಿ ಓರ್ವ ಮೃತಪಟ್ಟಿದ್ದು ಮತ್ತು ಮತ್ತೊಂಬನಿಗೆ ಗಂಭೀರ ಗಾಯವಾಗಿದೆ.
ಸಂಚರಿಸುತ್ತಿದ್ದ ವೇಳೆ ಈ ದುರ್ಘಟನೆ ಜರುಗಿದ್ದು ಸ್ಥಳದಲ್ಲಿ ಒಬ್ಬ ಮೃತಪಟ್ಟಿದ್ದಾನೆ ಮತ್ತೊಬ್ಬನ ಸ್ಥಿತಿ ಗಂಭೀರವಾದ ಪರಿಣಾಮ ಸ್ಥಳೀಯರು ಸಮೀಪದ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ರವಾನಿಸಿದ್ದಾರೆ.
ಸುದ್ದಿ ತಿಳಿದ ಕೂಡಲೇ ಹನೂರು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.