ಸಿಂದಗಿ : ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಅಪರಿಚಿತ ವ್ಯಕ್ತಿಯೊಬ್ಬ ಸುಟ್ಟು ಕರಕಲಾದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕಕ್ಕಳಮೇಲಿ ಗ್ರಾಮದಲ್ಲಿ ನಡೆದಿದೆ.
ಜಾನುವಾರುಗಳಿಗೆ ಸಂಗ್ರಹಿಸಿಟ್ಟಿದ್ದ ಹುಲ್ಲಿನ ಬಣವೆಗೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿದ ಪರಿಣಾಮವಾಗಿ ಅಪರಿಚಿತ ವ್ಯಕ್ತಿ ಸುಟ್ಟ ಭಸ್ಮವಾಗಿದ್ದಾನೆ.
37 ವರ್ಷದ ಅಪರಿಚಿತ ವ್ಯಕ್ತಿ ಸುಟ್ಟು ಹೋಗಿದ್ದಾನೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿಗಳು ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.