ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಮಾನ್ಯತೆ: ಇಂಡಿಯಲ್ಲಿ ಸಂಭ್ರಮಾಚರಣೆ
ಇಂಡಿ: ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6 ರಿಂದ 8ನೇ ತರಗತಿ) ಸಂಘಕ್ಕೆ ಸರ್ಕಾರವು ಮಾನ್ಯತೆ ನೀಡಿದ್ದು ಅತೀವ ಸಂತಸ ತಂದಿದೆ ಎಂದು ಜಿಪಿಟಿ ಸಂಘದ ತಾಲ್ಲೂಕು ಅಧ್ಯಕ್ಷ ಶಂಕರ್ ಕೋಳೆಕರ ಹೇಳಿದರು.
ಪಟ್ಟಣದ ತಾಲ್ಲೂಕು ಕ್ಷೇತ್ರ ಶಿಕ್ಷಣ ಇಲಾಖೆ ಕಾರ್ಯಾಲಯದಲ್ಲಿ ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಬಿಇಓ ಟಿ ಎಸ್ ಆಲಗೂರ ಅವರಿಗೆ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.
ಮಾನ್ಯತೆಗಾಗಿ ಶಿಕ್ಷಕರ ಸಂಘದ ಅಧ್ಯಕ್ಷರು ಶಾಲಾ ಶಿಕ್ಷಣ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದರು. ಕರ್ನಾಟಕ ಸಿವಿಲ್ ಸೇವಾ (ಸೇವಾ ಸಂಘಗಳ ಮಾನ್ಯತೆ) ಸಂಘಗಳ ಮಾನ್ಯತೆ ನಿಯಮಗಳು-2015 ರ ಅನ್ವಯ ಮಾನ್ಯತೆ ಹೊಂದಲು ಅರ್ಹತೆ ಹೊಂದಿರುತ್ತಾರೆ ಎಂದು ಶಾಲಾ ಶಿಕ್ಷಣ ಆಯುಕ್ತರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಈ ಪ್ರಸ್ತಾವನೆಯನ್ನು ಪರಿಶೀಲಿಸಿದ ಬಳಿಕ ಸರ್ಕಾರವು ಸಂಘಕ್ಕೆ ಮಾನ್ಯತೆ ನೀಡಿದ್ದು ಅತೀವ ಸಂತಸ ತಂದಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಇಂಡಿ ತಾಲೂಕ ಅಧ್ಯಕ್ಷ ಎಸ್ ಡಿ ಪಾಟೀಲ, ವಿಭಾಗೀಯ ಸಂಘಟನಾ ಕಾರ್ಯದರ್ಶಿ ಎಸ್ ಆರ್ ಪಾಟೀಲ, ಪ್ರಾಥಮಿಕ ಶಾಲಾ ಶಿಕ್ಷಕರ ಸೊಸೈಟಿ ಅಧ್ಯಕ್ಷ ಪಿ ಎಸ್ ಚಾಂದಕವಟೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವೈ ಟಿ ಪಾಟೀಲ,ಅಲ್ಲಾಭಕ್ಷ ವಾಲೀಕಾರ, ಎಸ್ ವ್ಹಿ ಹರಳಯ್ಯ, ಸುರೇಶ ಚವ್ಹಾಣ, ಶಶಿ ವಡ್ಡರ, ಹನಮಂತರಾಯ ಪೂಜಾರಿ,ವಿಜಯಪುರ ಜಿಪಿಟಿ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ ಹಕಾರಿ,ಶಿವಾನಂದ ಡಬ್ಬಿಗೇರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕ್ಷೇತ್ರ ಶಿಕ್ಷಣ ಇಲಾಖೆ ಕಾರ್ಯಾಲಯದಲ್ಲಿ ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಬಿಇಓ ಟಿ ಎಸ್ ಆಲಗೂರ ಅವರಿಗೆ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.




















