ಲಿಂಗಸೂಗೂರು: ಗ್ರಾಮಗಳ ಅಭಿವೃದ್ಧಿಯೇ ದೇಶ ಅಭಿವೃದ್ಧಿ ಎಂಬ ಸಂಕಲ್ಪದೊಂದಿಗೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಎಂಬ ವಿಶೇಷ ಕಾರ್ಯಕ್ರಮ ತಾಲೂಕಿನ ಯರಗುಂಟಿ ಗ್ರಾಮದಲ್ಲಿ ನಡೆಯಿತು.
ಹಟ್ಟಿ ಚಿನ್ನದ ಗಣಿ ಕಂಪನಿ ಅಧ್ಯಕ್ಷರು ಮಾಜಿ ಶಾಸಕರಾದ ಡಾ. ಮಾನಪ್ಪ ಡಿ ವಜ್ಜಲ್ ರವರು ಭಾಗವಹಿಸಿ ಅಧಿಕಾರಿಗಳು ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಸೇರಿ ಸಹಕಾರ ಮನೋಭಾವ ಕಾರ್ಯದಿಂದ ಗ್ರಾಮಗಳು ಅಭಿವೃದ್ಧಿಯ ಪಥದತ್ತ ಸಾಗುತ್ತವೆ. ಗ್ರಾಮ ಪಂಚಾಯತಿ ಸದಸ್ಯರು ಚುನಾಯಿತರಾದ ಮೇಲೆ ಪಕ್ಷಾತೀತವಾಗಿ ಕೆಲಸಮಾಡಬೇಕು. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸ್ಪಷ್ಟತೆಯಿಂದ ಕಾರ್ಯ ನಿರ್ವಹಿಸಬೆಕು. ಕಾನೂನು ಬಾಹಿರ ಮತ್ತು ಭ್ರಷ್ಟಾಚಾರದಲ್ಲಿ ತೊಡಗಿರುವವರನ್ನು ಕೊಡಲೆ ಕ್ರಮ ಜರುಗಿಸಬೇಕು ಎಂದರು. ಅಲ್ಲದೆ ಕೆಲ ಅರ್ಹತಾ ಫಲನಾಭವಿಗಳಗೆ ಅರ್ಹತಾ ಪ್ರಮಾಣ ಪತ್ರಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು, ಎಲ್ಲಾ ಇಲಾಖೆಯ ಅಧಿಕಾರಿಗಳು ಮುಖಂಡರು ಗ್ರಾಮಸ್ಥರು ಭಾಗವಹಿಸಿದ್ದರು.