ಸಿರಗುಪ್ಪ: ಈ ಬಾರಿ ತಾಲೂಕು ಪಂಚಾಯತಿ ಸದಸ್ಯರುಗಳ ಅವಧಿ ಇಲ್ಲದಿರುವುದರಿಂದ, ಬಸವರಾಜ ಅಡವಿಮಠ ಆಡಳಿತಾಧಿಕಾರಿಗಳು, ತಾಲೂಕು ಪಂಚಾಯತಿ, ಸಿರುಗುಪ್ಪ ಹಾಗೂ ಉಪ ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತಿ, ಬಳ್ಳಾರಿ ಇವರನ್ನು ಸಿರುಗುಪ್ಪ ತಾಲೂಕು ಪಂಚಾಯತಿ ಆಡಳಿತಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.
ಆಡಳಿತಾಧಿಕಾರಿಗಳು, ಇಂದು ತಾಲೂಕು ಪಂಚಾಯತಿ ಸಭಾಂಗಣದಲ್ಲಿ ತಾಲೂಕು ಪಂಚಾಯತಿ ಮತ್ತು ತಾಲೂಕು ಪಂಚಾಯತಿ ವ್ಯಾಪ್ತಿಯ 8 ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿ, ಕಳೆದ ಆರ್ಥಿಕ ಸಾಲಿನ ವೆಚ್ಚಕ್ಕೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ನಡೆಸಿದರು. ಪ್ರಸ್ತುತ ಆರ್ಥಿಕ ವರ್ಷದ ಲಿಂಕ್ ಡಾಕ್ಯೂಮೆಂಟ್‌ನಲ್ಲಿ ತಾಲೂಕು ಪಂಚಾಯತಿ ಮತ್ತು ತಾಲೂಕು ಪಂಚಾಯತಿ ವ್ಯಾಪ್ತಿಯ ಎಲ್ಲಾ ಇಲಾಖೆಗಳಿಗೆ ಬಿಡುಗಡೆಯಾದ ಅನುದಾನದ ಕ್ರಿಯಾ ಯೋಜನೆಯನ್ನು ಪರಿಶೀಲಿಸಿ ಅನುಮೋದನೆ ನೀಡಿದರು.