• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕಾಲಕ್ಕೆ ತಕ್ಕಂತೆ ತಂತ್ರಜ್ಞಾನ-ಕೌಶಲ್ಯಾಭಿವೃದ್ದಿ ಅಳವಡಿಸಿಕೊಂಡು ಉದ್ಯೋಗ ಪಡೆಯಲು ಮುಂದಾಗಲು – ಸಚಿವ ಡಾ.ಎಂ.ಬಿ.ಪಾಟೀಲ ಕರೆ

      By Voiceofjanata.in

      February 2, 2026
      0
      ಕಾಲಕ್ಕೆ ತಕ್ಕಂತೆ ತಂತ್ರಜ್ಞಾನ-ಕೌಶಲ್ಯಾಭಿವೃದ್ದಿ ಅಳವಡಿಸಿಕೊಂಡು ಉದ್ಯೋಗ ಪಡೆಯಲು ಮುಂದಾಗಲು – ಸಚಿವ ಡಾ.ಎಂ.ಬಿ.ಪಾಟೀಲ ಕರೆ
      0
      SHARES
      62
      VIEWS
      Share on FacebookShare on TwitterShare on whatsappShare on telegramShare on Mail

      ಯುವ ಸಮೃದ್ಧಿ ಸಮ್ಮೇಳನ-ವಿಜಯಪುರ ಉದ್ಯೋಗ ಮೇಳಕ್ಕೆ ಚಾಲನೆ

      ಕಾಲಕ್ಕೆ ತಕ್ಕಂತೆ ತಂತ್ರಜ್ಞಾನ-ಕೌಶಲ್ಯಾಭಿವೃದ್ದಿ ಅಳವಡಿಸಿಕೊಂಡು ಉದ್ಯೋಗ ಪಡೆಯಲು ಮುಂದಾಗಲು
      – ಸಚಿವ ಡಾ.ಎಂ.ಬಿ.ಪಾಟೀಲ ಕರೆ

      ವಿಜಯಪುರ, ಫೆ.02: ಇಂದಿನ ತಾಂತ್ರಿಕ ಯುಗದಲ್ಲಿ ಎಲ್ಲ ಕ್ಷೇತ್ರಗಳಲ್ಲಿಯೂ ಆರ್ಟಿಫಿಸಿಯಲ್ ಇಂಟಲಿಜೆನ್ಸ್ (ಎಆಯ್), ರೋಬೋಟ ತಂತ್ರಜ್ಞಾನ, ಗ್ರೀನ್ ಎನರ್ಜಿ ದಾಪುಗಾಲಿಟ್ಟಿದ್ದು, ಈ ಕಾಲಕ್ಕೆ ತಕ್ಕಂತೆ ಹೊಂದಿಕೊಂಡು, ತಂತ್ರಜ್ಞಾನವನ್ನು ಅಳವಡಿಸಿಕೊಂಡು, ಕೌಶಲ್ಯಕ್ಕೆ ತಕ್ಕಂತೆ ಉದ್ಯೋಗ ಪಡೆಯಲು ಇಂದಿನ ಯುವ ಜನಾಂಗ ಮುಂದಾಗಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.

      ಕೌಶಲ್ಯಾಭಿವೃದ್ಧಿ, ಉದ್ಯಮಶಿಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಬೆಂಗಳೂರು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಸೋಮವಾರ ನಗರದ ದರ್ಬಾರ ಶಾಲಾ ಆವರಣದಲ್ಲಿ ಹಮ್ಮಿಕೊಂಡ ಯುವ ಸಮೃದ್ಧಿ ಸಮ್ಮೇಳನ-ವಿಜಯಪುರ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

      ಸಾಫ್ಡ್ ವೇರ್ ಕ್ಷೇತ್ರದಲ್ಲೂ ಕರ್ನಾಟಕ ಮುಂಚೂಣಿಯಲ್ಲಿದೆ. ಇದು ರಾಜ್ಯದ ಶಕ್ತಿಯಾಗಿದೆ. ಕಾಲ ಬದಲಾವಣೆಗೆ ಅನುಗುಣವಾಗಿ ವಿವಿಧ ಕ್ಷೇತ್ರಗಳಲ್ಲಿ ತಂತ್ರಜ್ಞಾನದ ಅಳವಡಿಕೆ ಹಾಗೂ ಅರಿವು ಹೊಂದುವುದು ಅತ್ಯವಶ್ಯಕವಾಗಿದೆ.
      ಈ ನಿಟ್ಟಿನಲ್ಲಿ ಎಂಟನೇ ತರಗತಿಯಿಂದಲೇ ಮಕ್ಕಳಲ್ಲಿ ಕೌಶಲ್ಯ ರೂಡಿಸಿಕೊಂಡು ಸಿದ್ಧಗೊಳಿಸಬೇಕಾದ ಅನಿವಾರ್ಯತೆ ಇದೆ ಎಂದು ಅವರು ಹೇಳಿದರು.

      ಇಂದು ಆಯೋಜಿಸಲಾದ ಉದ್ಯೋಗ ಮೇಳ ಐತಿಹಾಸಿಕ ಕಾರ್ಯಕ್ರಮವಾಗಿದೆ. ಈ ಉದ್ಯೋಗ ಮೇಳದಲ್ಲಿ 25 ಸಾವಿರ ಉದ್ಯೋಗಾಕಾಂಕ್ಷಿಗಳು ನೊಂದಣಿ ಮಾಡಿಕೊಂಡಿದ್ದಾರೆ. ಬೇರೆ ಬೇರೆ ಉದ್ಯೋಗದಾತ ಕಂಪನಿಗಳ ಮೂಲಕ ಆಯ್ಕೆ ಬಯಸಿ ಈ ಮೇಳದ ಕುರಿತು ಯುವಜನರು ಆಶಾ ಕಿರಣ ಹೊಂದಿದ್ದಾರೆ. ಯುವ ನಿರುದ್ಯೋಗಿಗಳಿಗೆ ಅನುಕೂಲ ಕಲ್ಪಿಸುವ ಧ್ಯೇಯೋದ್ದೇಶದೊಂದಿಗೆ, ಇಂತಹ ಮೇಳಗಳನ್ನು ಆಯೋಜಿಸಿ ಸಹಾಯ-ಸಹಕಾರದೊಂದಿಗೆ ಅವಕಾಶಗಳನ್ನು ಒದಗಿಸಲಾಗುತ್ತಿದೆ ಎಂದು ಅವರು ಹೇಳಿದರು.

      ಯುವ ಜನರು ದೇಶದ ಶಕ್ತಿಯಾಗಿದ್ದಾರೆ. 140 ಕೋಟಿ ಜನಸಂಖ್ಯೆಯಲ್ಲಿ ಶೇ.40 ರಷ್ಟು ಯುವಕರಿದ್ದಾರೆ. ಈ ಹಿಂದೆ ವಿದ್ಯಾಭ್ಯಾಸಕ್ಕೆ ರಾಜ್ಯದ ಮೈಸೂರು ಮಹಾರಾಜರು ವಿವಿಧ ಶಿಕ್ಷಣ ಸಂಸ್ಥೆ- ಉದ್ಯಮಗಳಲ್ಲಿ ಸ್ಥಾಪಿಸಿದ್ದರು. ದೇಶಾದ್ಯಂತ ಯುವ ಉದ್ಯೋಗಿಗಳು ಉದ್ಯೋಗ ಅರಸಿ ಕರ್ನಾಟಕಕ್ಕೆ ಬರುತ್ತಿದ್ದರು. ನಮ್ಮಲ್ಲಿಯೂ ಪ್ರತಿಭಾವಂತರಿದ್ದು, ಅವರು ದೇಶ-ವಿದೇಶಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದು ನಮಗೆ ಹೆಮ್ಮೆಯಾಗಿದೆ. ರಾಜ್ಯ ಸೇವಾ ವಲಯದಲ್ಲಿ ಮಾಹಿತಿ ತಂತ್ರಜ್ಞಾನದಲ್ಲಿ ಜೈವಿಕ ತಂತ್ರಜ್ಞಾನ, ಮಶಿನ್ ಟೂಲ್ಸ್ ತಯಾರಿಕೆಯಲ್ಲಿಯೂ ಮುಂಚೂಣಿಯಲ್ಲಿದ್ದೇವೆ. ಪ್ರತಿಭಾವಂತರು ಕೂಡಿದ ಬುದ್ದಿವಂತರ ಸಮೂಹ ಹೊಂದಿದ ರಾಜ್ಯ ನಮ್ಮದಾಗಿದೆ ಎಂದು ಅವರು ಹೇಳಿದರು.

      ಗ್ರಾಮೀಣ ಭಾಗದಲ್ಲಿ ಅನೇಕ ಪ್ರತಿಭಾವಂತರಿದ್ದಾರೆ. ಹುಟ್ಟಿನಿಂದ ಯಾರೂ ಕಲಿತು ಬಂದಿರುವುದಿಲ್ಲ. ಅವರ ಪ್ರತಿಭೆ ಅನಾವರಣಕ್ಕೆ ಅವಕಾಶ ಕಲ್ಪಿಸಬೇಕು. ಕೌಶಲ್ಯಾಭಿವೃಧ್ದಿಗೆ ಒತ್ತು ನೀಡಿ ತಾಂತ್ರಿಕತೆಯನ್ನು ಅಳವಡಿಸಿಕೊಂಡು ಅವರನ್ನು ಸಿದ್ಧಗೊಳಿಸಬೇಕು. ತಾಂತ್ರಿಕ ಹಾಗೂ ಬೌಧ್ದಿಕವಾಗಿ ಸಮರ್ಥವಾಗಿಸಿ ಸಿದ್ಧಪಡಿಸಬೇಕು. ವಿವಿಧ ರಾಷ್ಟ್ರೀಯ-ಅಂತರರಾಷ್ಟ್ರೀಯ ಕಂಪನಿಗಳು ಆನ್‍ಲೈನ್ ತರಬೇತಿ ನೀಡುತ್ತಿವೆ. ಈ ಕುರಿತು ಪ್ರತಿಯೊಬ್ಬರು ಮಾಹಿತಿ ಹೊಂದಿ, ಬದಲಾವಣೆಗೆ ತಕ್ಕಂತೆ ಕೌಶಲ್ಯವನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.

      ಭವಿಷ್ಯದಲ್ಲಿ ಉದ್ಯೋಗ ಪಡೆಯಲು ಕೌಶಲ್ಯ ತರಬೇತಿ ಹೊಂದುವುದು ಅತ್ಯವಶ್ಯಕವಾಗಿದೆ. ಯುವಪೀಳಿಗೆಯನ್ನು ಭವಿಷ್ಯದ ದೃಷ್ಟಿಯಿಂದ ಸಿದ್ಧಪಡಿಸಬೇಕು. ಕೌಶಲ್ಯ ರೂಢಿಸಿಕೊಂಡು ಒಳ್ಳೆಯ ಅವಕಾಶ ಪಡೆಯುವ ಮೂಲಕ ಉದ್ಯೋಗದಾತರಾಗಿ ಹೊರಹೊಮ್ಮಬೇಕೆಂಬ ಅಭಿಲಾಷೆಯನ್ನು ವ್ಯಕ್ತಪಡಿಸಿದ ಅವರು, ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
      ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದ ಶರಣ ಪ್ರಕಾಶ ಪಾಟೀಲ ಅವರು ಮಾತನಾಡಿ, ಜಿಲ್ಲೆಯಲ್ಲಿರುವ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ನೀಡುವ ಗುರಿಯೊಂದಿಗೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಮೈಸೂರು ಮತ್ತು ಕಲಬುರಗಿಯಲ್ಲಿ ಈಗಾಗಲೇ ಯಶಸ್ವಿಯಾಗಿ ಉದ್ಯೋಗ ಮೇಳ ಕೈಗೊಂಡು ಯಶಸ್ವಿಗೊಳಿಸಲಾಗಿದೆ. ರಾಜ್ಯದಲ್ಲಿ 3 ಬೃಹತ್ ಉದ್ಯೋಗ ಮೇಳಗಳನ್ನು ಆಯೋಜಿಸಲಾಗಿದೆ. ಬೆಂಗಳೂರಿನಲ್ಲಿ ಎರಡು ದಿನ ನಡೆದ ಉದ್ಯೋಗ ಮೇಳದಲ್ಲಿ 45 ಸಾವಿರ ಉದ್ಯೋಗಾಕಾಂಕ್ಷಿಗಳು ನೊಂದಾಯಿಸಿಕೊಂಡಿದ್ದು, 14 ಸಾವಿರ ಜನರಿಗೆ ಉದ್ಯೋಗ ದೊರೆತಿದೆ ಎಂದು ಅವರು ಹೇಳಿದರು.

      ರಾಜ್ಯದ ಯುವಕರು ಪ್ರತಿಭಾವಂತರಿದ್ದಾರೆ. ಅವರಿಗೆ ಉತ್ತಮ ಮಾರ್ಗದರ್ಶನ ಹಾಗೂ ಅವಕಾಶ ಕಲ್ಪಿಸುವ ಉದ್ದೇಶ ಹೊಂದಿ ಉದ್ಯೋಗ ಮೇಳಗಳನ್ನು ಆಯೋಜಿಸಲಾಗುತ್ತಿದೆ. ಮುಂಬರುವ ದಿನಗಳಲ್ಲಿ ರಾಜ್ಯದ ಎಲ್ಲ ವಿಭಾಗಗಳಲ್ಲಿ ಉದ್ಯೋಗ ಮೇಳ ಆಯೋಜಿಸಲು ನಿರ್ಧರಿಸಲಾಗಿದೆ. ಬೃಹತ್ ಉದ್ಯೋಗ ಮೇಳವನ್ನು ಹುಬ್ಬಳ್ಳಿಯಲ್ಲಿ ಆಯೋಜಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದೇ ವರ್ಷ ಏಪ್ರಿಲ್ 4 ರಂದು ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಉದ್ಯೋಗ ಮೇಳ ಆಯೊಜನೆಗೆ ಸಿದ್ಧತೆ ನಡೆದಿದ್ದು, ಈ ಮೇಳದಲ್ಲಿ ಬೇರೆ ಬೇರೆ ದೇಶದ ಕಂಪನಿಗಳು ಭಾಗವಹಿಸಲಿರುವುದರಿಂದ ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಉದ್ಯೋಗ ದೊರಕಿಸಲು ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.

      ದೇಶದಲ್ಲಿ ಅತಿ ಹೆಚ್ಚು ಕೌಶಲ್ಯ ಹೊಂದಿದ ರಾಜ್ಯ ಕರ್ನಾಟಕ ರಾಜ್ಯವಾಗಿದೆ. ರಾಜ್ಯದಿಂದ ಪ್ರತಿ ವರ್ಷ ಸುಮಾರು 1.15 ಲಕ್ಷ ಇಂಜಿನೀಯರ್ ಪದವಿ ಪಡೆದುಕೊಳ್ಳುತ್ತಿದ್ದಾರೆ. ಯುವಕರಿಗೆ ಕೌಶಲ್ಯ ತರಬೇತಿ ನೀಡುವ ಕಾರ್ಯ ನಮ್ಮ ಸರ್ಕಾರ ಮಾಡುತ್ತಿದೆ. ಕೌಶಲ್ಯ ಕೊರತೆ ನೀಗಿಸಲು ಇಂಡಸ್ಟ್ರೀಜ್ ಲಿಂಕೇಜ್ ಜಾರಿ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
      ಯುವ ನಿಧಿ ಯೋಜನೆಯಡಿ ನೊಂದಣಿಯಾದ ಫಲಾನುಭವಿಗಳಿಗೆ ಈಗಾಗಲೇ ನಿರುದ್ಯೋಗ ಭತ್ಯೆ ನೀಡಲಾಗುತ್ತಿದ್ದು, ಇದರೊಂದಿಗೆ ಇಂದಿನ ತಂತ್ರಜ್ಞಾನಕ್ಕನುಗುಣವಾಗಿ ಕೌಶಲ್ಯ ತರಬೇತಿ ನೀಡಲು ನಮ್ಮ ಸರ್ಕಾರ ಪ್ರಯತ್ನಿಸುತ್ತಿದೆ. ಕೌಶಲ್ಯಾಭಿವೃದ್ದಿ ಇಲಾಖೆಯಿಂದ ವಿವಿಧ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

      ಕೌಶಲ್ಯಾಭಿವೃದ್ದಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಕಾಂತಾ ನಾಯಕ ಅವರು ಮಾತನಾಡಿ, ಪದವಿಯೊಂದಿಗೆ ಕೌಶಲ್ಯ ರೂಢಿಸಿಕೊಳ್ಳಬೇಕು. ಕೌಶಲ್ಯ ಒಂದು ಶಕ್ತಿ, ಆಯುಧ, ಇದನ್ನು ಇಂದಿನ ಯುವಕರು ಅರಿತುಕೊಳ್ಳಬೇಕು. ಕೌಶಲ್ಯಾಭಿವೃದ್ದಿ ನಿಗಮದದಿಂದ ನನ್ನ ವೃತ್ತಿ, ನನ್ನ ಆಯ್ಕೆ ಸೇರಿದಂತೆ ವಿವಿಧ ತರಬೇತಿಗಳನ್ನು ನೀಡಲಾಗುತ್ತಿದೆ. ಸ್ವಾವಲಂಬಿ ಬದುಕಿಗೆ ಕೌಶಲ್ಯಾಭಿವೃದ್ದಿ ಅವಶ್ಯಕವಿದ್ದು, ಈ ನಿಟ್ಟಿನಲ್ಲಿ ಮಹಿಳೆಯರು ಸ್ವಾವಲಂಬಿಯಾಗಲು ನಲ್-ಜಲ್ ಯೋಜನೆಯಡಿ ಅಸಾಧಾರಣ ಕೌಶಲ್ಯ ರೂಪಿಸಿಕೊಳ್ಳಲು ತರಬೇತಿ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

      ಈ ಸಂದರ್ಭದಲ್ಲಿ ನವಕರ್ನಾಟಕ ನಿರ್ಮಾಣಕ್ಕಾಗಿ ನವ ಕೌಶಲ್ಯಗಳು ಪುಸ್ತಕ ಬಿಡುಗಡೆ ಮಾಡಲಾಯಿತು. ಜಲಜೀವನ ಮಿಷನ್ ಅಡಿಯಲ್ಲಿ ನಲ್-ಜಲ್ ಮಿತ್ರ ಕಾರ್ಯಕ್ರಮದಡಿ ಗ್ರಾಮ ಪಂಚಾಯತ್ ಕಾರ್ಯಾಲಯ ವ್ಯಾಪ್ತಿಯ ಎರಡು ಜನ ಮಹಿಳಾ ಸ್ವಸಹಾಯ ಸದಸ್ಯರಿಗೆ ಒಟ್ಟು 17 ದಿನಗಳವರೆಗೆ ಯಶಸ್ವಿಯಾಗಿ ಪಠ್ಯಕ್ರಮದಂತೆ ತರಗತಿ ಹಾಗೂ ಪ್ರಾಯೋಗಿಕ ತರಗತಿ ನೀಡಿ ನಂತರ 23 ದಿನಗಳ ಕಾಲ ಓಜೆಟಿ ತರಗತಿ ಕೈಗೊಂಡು ಮಹಿಳೆ ಸ್ವಾವಲಂಬಿಯಾಗಲು ಕೈಗೊಂಡ ಯೋಜನೆಯಡಿ ಸಾಂಕೇತಿಕವಾಗಿ ಹತ್ತು ಜನರಿಗೆ ಕಿಟ್ ವಿತರಿಸಲಾಯಿತು.

      ಚಲನಚಿತ್ರ ನಟಿ ಸಪ್ತಮಿ ಗೌಡ ಅವರು ಮಾತನಾಡಿದರು. ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಸ್ನೇಹಲ ಆರ್. ಸ್ವಾಗತಿಸಿದರು. ಧಾರವಾಡ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಕನ್ನಾನ್ ಮುಶ್ರೀಫ್, ಜಿಲ್ಲಾಧಿಕಾರಿ ಡಾ.ಆನಂದ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಗ್ಯಾರಂಟಿ ಯೋಜನೆಗಳ ತಾಲೂಕಾ ಅನುಷ್ಠಾನ ಸಮಿತಿ ಅಧ್ಯಕ್ಷ-ಉಪಾಧ್ಯಕ್ಷರು, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು, ಉದ್ಯೋಗದಾತ ಸಂಸ್ಥೆಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

      Tags: #Adopt technology-skill development as per the time and get employment - Minister Dr. M. B. Patil called#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಕಾಲಕ್ಕೆ ತಕ್ಕಂತೆ ತಂತ್ರಜ್ಞಾನ-ಕೌಶಲ್ಯಾಭಿವೃದ್ದಿ ಅಳವಡಿಸಿಕೊಂಡು ಉದ್ಯೋಗ ಪಡೆಯಲು ಮುಂದಾಗಲು – ಸಚಿವ ಡಾ.ಎಂ.ಬಿ.ಪಾಟೀಲ ಕರೆCrime
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      April 6, 2026
      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.