ಇಂಡಿ : ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಒಣಗಾಂಜಾವನ್ನು ಅಬಕಾರಿ ಪೊಲೀಸರು ಜಪ್ತಿಗೈದಿರುವ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಮಿರಗಿ ಗ್ರಾಮದಲ್ಲಿ ನಡೆದಿದೆ. ಚಂದ್ರಾಮ ಬಡದಾಳೆ ಬಂಧಿತ ಆರೋಪಿ. ಇನ್ನು ಖಚಿತ ಮಾಹಿತಿ ಮೇರೆಗೆ ಅಬಕಾರಿ ಪೊಲೀಸರ ಚಂದ್ರಮ ತೋಟದಲ್ಲಿ ದಾಳಿಗೈದು 2.20 ಲಕ್ಷ ಮೌಲ್ಯದ 11 ಕೆ.ಜಿ ಒಣಗಾಂಜಾ ಜಪ್ತಿಗೈದಿದ್ದಾರೆ. ಅಲ್ಲದೇ, ಆರೋಪಿ ಚಂದ್ರಮ ಪೊಲೀಸರು ವಶಕ್ಕೆ ಪಡೆದುಕೊಂಡು ಎಸ್‌ಡಿಪಿಐ ಅಡಿಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.