ಅಫಜಲಪುರ: ಪ್ರಧಾನಿ ನರೇಂದ್ರ ಮೋದಿ, ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಗಳು ದೇಶ ಮತ್ತು ರಾಜ್ಯದ ಅಭಿವೃದ್ಧಿಗೆ ಕೈಗೊಂಡಿರುವ ಯೋಜನೆಗಳ ಬಗ್ಗೆ ಬೂತ್ ಮಟ್ಟದಲ್ಲಿ ಪ್ರತಿ ಮತದಾರರಿಗೂ ಮನವರಿಕೆ ಮಾಡಿಕೊಟ್ಟು ಮತ್ತೆ ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು ಎಂದು ಬಿಜೆಪಿ ಮುಖಂಡ ಅವ್ವಣ್ಣ ಮ್ಯಾಕೇರಿ ಹೇಳಿದರು.
ಅವರು ತಾಲೂಕಿನ ಮಣ್ಣೂರ ಗ್ರಾಮದಲ್ಲಿ ಬಿಜೆಪಿ ಬೂತ್ ವಿಜಯ ಅಭಿಯಾನದ ಅಂಗವಾಗಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಕರಪತ್ರದ ಮೂಲಕ ಜನರಿಗೆ ತಿಳಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಪ್ರಧಾನಿ ನರೇಂದ್ರ ಮೋದಿ, ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೇಶ ಮತ್ತು ರಾಜ್ಯದ ಅಭಿವೃದ್ದಿಗೆ ಕೈಗೊಂಡಿರುವ ಯೋಜನೆಗಳ ಬಗ್ಗೆ ಬೂತ್ ಮಟ್ಟದಲ್ಲಿ ಪ್ರತಿಯೊಬ್ಬ ಮತದಾರರಿಗೂ ಮನವರಿಕೆ ಮಾಡಿಕೊಟ್ಟು ಮತ್ತೇ ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಬೂತ್ ವಿಜಯ ಅಭಿಯಾನ ಪರಿಣಾಮಕಾರಿಯಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಭೀಮರಾಯ ಕಲಶೆಟ್ಟಿ ಸುರೇಖಾ ಪದಕಿ ತಾಲೂಕು ಪ್ರಧಾನ ಕಾರ್ಯದರ್ಶಿ ಸುಭಾಷ ಪ್ಯಾಟಿ ಸಂಜೀವಕುಮಾರ ನನ್ನಾಜಿ ಬಸವರಾಜ ಸೂರೇಗಾಂವ ಮಹಾಂತೇಶ ಜಕಾಪೂರ ಅಶೋಕ ನಾವದಗಿ ಶಿವಪುತ್ರ ಲಾಳಸಂಗಿ ಪ್ರಫುಲ್ ಅರ್ಜುಣಗಿ ರವಿ ಭುಯ್ಯಾರ ಶ್ರೀಶೈಲ ವಳಸಂಗ ಇತರರಿದ್ದರು.
ವರದಿ: ಉಮೇಶ್ ಅಚಲೇರಿ ವಾಯ್ಸ್ ಆಫ್ ಜನತಾ ಅಫಜಲಪುರ.