ವಿಶ್ವವಿದ್ಯಾಲಯದಲ್ಲಿ ಲೈಂಗಿಕ ಕಿರುಕುಳ ಆರೋಪ..!
ವಿಜಯಪುರ: ಅಕ್ಕ ಮಹಾದೇವಿ ವಿಶ್ವವಿದ್ಯಾಲಯದಲ್ಲಿ ಪಿಎಚ್ಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪದಲ್ಲಿ ಸೂಕ್ತ ತನಿಖೆ ನಡೆಸಲಾಗುವುದು ಎಂದು ಅಕ್ಕ ಮಹಿಳಾ ವಿವಿಯ ಕುಲಪತಿ ಪ್ರೊ.ತುಳಸಿಮಾಲಾ ಹೇಳಿದರು. ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಮಹಿಳಾ ವಿವಿಯ ಪ್ರೊ.ಮಲ್ಲಿಕಾರ್ಜುನ ಎನ್ ಎಲ್ ಎಂಬಾತನಿಂದ ಕಿರುಕುಳ ಆರೋಪ ಕೇಳಿ ಬಂದಿದೆ. ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳದ ಆರೋಪದ ವಿಚಾರವಾಗಿ ಎರಡು ಸುತ್ತಿನ ವಿಚಾರಣೆ ನಡೆಸಲಾಗಿದೆ. ಆಂತರಿಕ ದೂರು ಸಮಿತಿಯಲ್ಲಿ ಈಗಾಗಲೇ ವಿಚಾರಣೆ ನಡೆಸಲಾಗಿದೆ. ನಮ್ಮ ವಿಶ್ವ ವಿದ್ಯಾನಿಲಯದ ಇತಿಹಾಸದಲ್ಲಿ ಇಂತಹ ಘಟನೆ ನಡೆದಿರಲಿಲ್ಲ.
ಘಟಿಕೊತ್ಸವದ ಕಾರ್ಯಕ್ರಮ ಇರುವ ಹಿನ್ನಲೆ ವಿಚಾರಣೆಗೆ ಸ್ವಲ್ಪ ಮುಂದೂಡಲಾಗಿದೆ. ಇನ್ನೊಂದು ಸುತ್ತಿನ ವಿಚಾರಣೆ ನಡೆಸಿ ವರದಿ ಅನ್ವಯ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗಿವದು. ಯಾವುದೇ ಮುಲಾಜಿಲ್ಲದೇ ಕ್ರಮ ಜರಿಗಿಸಲಾಗುವದು ಎಂದರು.