ವಸತಿನಿಲಯಕ್ಕೆ ಪ್ರವೇಶಕ್ಕೆ ಅರ್ಜಿ ಆಹ್ವಾನ
ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
ಮುದ್ದೇಬಿಹಾಳ: ತಾಲ್ಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ಡಾ.ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಹಾಗೂ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಕರೆಯಲಾಗಿದೆ.
ವೆಬ್ ಸೈಟ್ ನಲ್ಲಿ ಅರ್ಜಿ ಕರೆಯಲಾಗಿದೆ.
https://swdhmis.karnataka.
gov.in/ ಮೂಲಕ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಹಾಗೂ ಇತರೆ ಸಮುದಾಯದ ವಿದ್ಯಾರ್ಥಿಗಳು ಅರ್ಜಿಸಲ್ಲಿಸಬಹುದಾಗಿದೆ. ಸಲ್ಲಿಕೆಯಾದ ಅರ್ಜಿಯ ಒಂದು ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಲಗತ್ತಿಸಿ, ಸಹಾಯಕ ನಿರ್ದೇಶಕರು ಗ್ರೇಡ್-2, ಸಮಾಜ ಕಲ್ಯಾಣ ಇಲಾಖೆ, ಹುಡ್ಕೊ ಕಾಲೊನಿ, ಮುದ್ದೇಬಿಹಾಳ ಇಲ್ಲಿಗೆ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆಗೆ 9480843088 ಸಂಪರ್ಕಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ತ ಬಸಂತಿ ಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.