ವಿಜಯಪುರ : ಅಂಗನವಾಡಿ ನೌಕರರ ಗೌರವ ಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದವರು ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು. ಇನ್ನು ಅಂಗನವಾಡಿ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಿ ಎಂದು ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಘೋ ಕೂಗಿದರು. ಅಲ್ಲದೇ, ಅಂಗನವಾಡಿ ನೌಕರರಿಗೆ ಕನಿಷ್ಠ ವೇತನ 21 ಸಾವಿರ ಸೇರಿದಂತೆ 9ಕ್ಕೂ ಹೆಚ್ಚು ಬೇಡಿಕೆಗಳನ್ನು ಪೂರ್ಣ ಮಾಡಬೇಕು ಎಂದು ಡಿಸಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.