ರಾಯಲ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ
ಇಂಡಿ: ಶಾಲೆಯಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸದ ಜೊತೆಯಲ್ಲಿ ಆರೋಗ್ಯದ ದೃಷ್ಟಿಯಿಂದ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದು ತುಂಬಾ ಮುಖ್ಯವಾಗಿದೆ ಎಂದು ರಹಮತ್ ಉಲ್ಲ ಆದ್ದೇವಾಲ್ ಹೇಳಿದರು.ಅವರು ಪಟ್ಟಣದ ರಾಯಲ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಹಮ್ಮಿಕೊಂಡ ವಾರ್ಷಿಕ ಶಾಲಾ ಕ್ರೀಡಾಕೂಟ ವನ್ನು ಉದ್ದೇಶಿಸಿ ಮಾತನಾಡಿದರು.
ಪೋಷಕರು ಹಾಗೂ ಶಾಲಾ ಶಿಕ್ಷಕರು ಮಕ್ಕಳಿಗೆ ವಿದ್ಯೆಯ ಜೊತೆಯಲ್ಲಿ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದು ಅವಶ್ಯವಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಹೇಳಿದರು. ಸಂಸ್ಥೆಯ ಅಧ್ಯಕ್ಷ ಅಸ್ಲಾಂ ಪಟೇಲ್, ಮಹಮದ್ ಗುಲ್ಬರ್ಗಾ, ಉಮರ್ ಶೇಖ್, ಮುಕ್ತಾರ್ ಟಾoಗೇವಾಲೆ,ನೂರು ವಾಚ್ ಮೇಕರ್,ಅನ್ವರ್ ಇನಾಮದಾರ,ಶರ್ಫೀ ತೋಳನೂರ, ಸಮಾಜ ಸೇವಕ ಹಸನ್ ಮುಜಾವರ, ಪಿಯು ವಿಭಾಗದ ಪ್ರಾಚಾರ್ಯ ಡಾ.ಗೀತಾ, ದೇವರಾಜ್ ಪ್ರೌಢಶಾಲಾ ಮುಖ್ಯ ಶಿಕ್ಷಕ ಸಯ್ಯದ್ ಶೇಖ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.