ಇಂಡಿ: ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ನೀಗಿಸಲು ತಾಲೂಕಿನಾದ್ಯಂತ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಕಳೆದ 4 ತಿಂಗಳಿನಿಂದ ಗೌರವಧನ ಬಾರದೆ ಕುಟುಂಬ ನಿರ್ವಹಣೆಗೆ ಅತಿಥಿ ಶಿಕ್ಷಕರು ಪರದಾಡುವಂತಾಗಿದೆ. ಕೂಡಲೇ ಬಾಕಿ ಇರುವ ಗೌರವಧನವನ್ನು ಬಿಡುಗಡೆಗೊಳಿಸಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದ್ದರೆ ಉಪವಾಸ ಜೊತೆಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಾಲಾ ಅತಿಥಿ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಡಿ ಎಮ್ ಕಲಕೇರಿ ಹೇಳಿದರು.
ಮಂಗಳವಾರ ಪಟ್ಟಣದ ಕ್ಷೆತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿಸಲ್ಲಿಸಿ ಅವರು ಮಾತನಾಡಿದರು. ಪ್ರಸಕ್ತ ಮಾರ್ಚ 2024-25 ನೇ ಸಾಲಿನ ವೇತನವನ್ನು ಇ.ಪಿ.166 ಹಾಗೂ ಎಸ್.ಇ.ಎಸ್ 2023 ರ ಸರ್ಕಾರದ ಆರ್ಥಿಕ ಇಲಾಖೆಯ ಆದೇಶದಂತೆ ಪ್ರಾಥಮಿಕ ಅತಿಥಿ ಶಿಕ್ಷಕರಿಗೆ 15000 ಹಾಗೂ ಫ್ರೌಢಶಾಲಾ ಅತಿಥಿ ಶಿಕ್ಷಕರಿಗೆ 16000 ರೂ. ಸಂಬಳವನ್ನು ಮಾಡಬೇಕು. ಪ್ರಸಕ್ತ ಸಾಲಿನಲ್ಲಿ ನೇಮಕಗೊಂಡ ಮುಖ್ಯಗುರುಗಳ ಖಾಲಿ ಸ್ಥಾನಕ್ಕೆ ಅತಿಥಿ ಶಿಕ್ಷಕರನ್ನು ವರ್ಷದ ಅಂತ್ಯದವರೆಗೆ ಮುಂದುವರಿಸಬೇಕು. ಇಲ್ಲವಾದಲ್ಲಿ ನಿಮ್ಮ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹದ ಜೋತೆಗೆ ಬೃಹತ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ರಾಘವೇಂದ್ರ ಕುಮಸಿಗಿ,ಎಸ್.ಎಮ್. ಬಿರಾದಾರ, ಬಿ.ಎಸ್. ಹೊಸೂರ, ಆರ್.ಎ. ಜಮಾದಾರ, ಎಪ್.ಎಚ್. ಟೇಲರ, ಡಿ ಎಮ್ ಕಲಕೇರಿ ಸೇರಿದಂತೆ ಅನೇಕ ಅತಿಥಿ ಶಿಕ್ಷಕರು ಉಪಸ್ಥಿತರಿದ್ದರು.
ಇಂಡಿ: ಪಟ್ಟಣದ ಕ್ಷೆತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್. ಆಲಗೂರರವರಿಗೆ ಮನವಿ ಸಲ್ಲಿಸಲಾಯಿತು.