ಬಸ್ ನಿಲ್ದಾಣಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಲು ಮನವಿ
ವಿಜಯಪುರ ಆ.8 : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದಿಂದ ಪ್ರಯಾಣಿಕರ ಅನುಕೂಲಕ್ಕಾಗಿರುವ ಸುಸಜ್ಜಿತವಾದ ಬಸ್ ನಿಲ್ದಾಣಗಳಲ್ಲಿ ಸಾರ್ವಜನಿಕರು-ಪ್ರಯಾಣಿಕರು ಎಲ್ಲೆಂದರಲ್ಲಿ ಕಸ ಒಗೆಯುವುದು, ಮೂತ್ರ ವಿಸರ್ಜನೆ, ಉಗುಳುವುದು ಮಾಡದೇ ನಿಲ್ದಾಣಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.
ಸಾರ್ವಜನಿಕರು, ಪ್ರಯಾಣಿಕರು ಬಸ್ ನಿಲ್ದಾಣಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಒಂದು ವೇಳೆ ಬಸ್ ನಿಲ್ದಾಣಗಳಲ್ಲಿ ಎಲ್ಲೆಂದರಲ್ಲಿ ಉಗುಳುವುದು, ಮೂತ್ರ ವಿಸರ್ಜನೆ, ಕಸ ಚೆಲ್ಲುವುದು ಕಂಡು ಬಂದಲ್ಲಿ ಅಂತಹ ಪ್ರಯಾಣಿಕರ ಮೇಲೆ ದಂಡ ವಿಧಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.