ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಶಾಲಾ-ಕಾಲೇಜಿಗೆ
ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ವಿಜಯಪುರ,ಮೇ.09 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಮೌಲಾನಾ ಆಜಾದ ಮಾದರಿ ವಸತಿ ಶಾಲೆ-ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ 157 ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕ / ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಮೇ.19 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಪ್ರೌಢಶಾಲಾ ವಿಭಾಗದಲ್ಲಿ ಕನ್ನಡ ಭಾಷಾ ಶಿಕ್ಷಕರು, ಇಂಗ್ಲೀಷ ಭಾಷಾ ಶಿಕ್ಷಕರು, ಹಿಂದಿ ಭಾಷಾ, ಉರ್ದು ಭಾಷಾ, ಗಣಿತ, ವಿಜ್ಞಾನ,ಸಮಾಜ ವಿಜ್ಞಾನ, ದೈಹಿಕ ಶಿಕ್ಷಣ, ಕಂಪ್ಯೂಟರ ಶಿಕ್ಷಕರು ಹಾಗೂ ಕಾಲೇಜು ವಿಭಾಗದಲ್ಲಿ ಕನ್ನಡ ಭಾಷಾ ಉಪನ್ಯಾಸಕರು, ಆಂಗ್ಲ ಭಾಷಾ, ಉರ್ದು ಭಾಷಾ, ಗಣಿತಶಾಸ್ತ್ರ, ಜೀವಶಾಸ್ತ್ರ,ಭೌತಶಾಸ್ತ್ರ ಹಾಗೂ ರಾಸಾಯನಶಾಸ್ತ್ರ ವಿಷಯಗಳ ಉಪನ್ಯಾಸಕÀರು ಹಾಗೂ ವಾಣಿಜ್ಯ ವಿಭಾಗದಲ್ಲಿ ಲೆಕ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಅರ್ಥಶಾಸ್ತ್ರ, ಕಂಪ್ಯೂಟರ್ ಸೈನ್ಸ್ ವಿಷಯಗಳಲ್ಲಿ ಅಗತ್ಯ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ https://dom.karnataka.gov.in ವೆಬ್ಸೈಟ್‍ನ್ನು, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,ಮೌಲಾನಾ ಆಜಾದ್ ಭವನ, ವಿಜ್ಞಾನ ಚಟುವಟಿಕೆಗಳ ಕೇಂದ್ರದ ಹತ್ತಿರ, ಜಿಲ್ಲಾ ಪಂಚಾಯತಿ ರಸ್ತೆ ಕನಕದಾಸ ಬಡಾವಣೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲೂಕು ಮಾಹಿತಿ ಕೇಂದ್ರಗಳಾದ ವಿಜಯಪುರ, ಇಂಡಿ, ಮುದ್ದೇಬಿಹಾಳ, ಸಿಂದಗಿ ಹಾಗೂ ಬಸವನ ಬಾಗೇವಾಡಿ ಮತ್ತು ಸಂಬಂಧಿಸಿದ ವಸತಿ ಶಾಲೆ-ಕಾಲೇಜಳಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಪ್ರಶಾಂತ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.