ಕೃಷಿ ಹೊಂಡಗಳಿಗೆ ಅರ್ಜಿ ಆಹ್ವಾನ
ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
ಮುದ್ದೇಬಿಹಾಳ: 2025-26 ನೇ ಸಾಲಿನಲ್ಲಿ ಕೃಷಿ ಇಲಾಖೆ ವತಿಯಿಂದ ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ಮುದ್ದೇಬಿಹಾಳ, ತಾಳಿಕೋಟಿ ತಾಲೂಕಿನ ರೈತರಿಗೆ ಕೃಷಿ ಹೊಂಡಗಳನ್ನು ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರು ಕೃಷಿ ಹೊಂಡಗಳನ್ನು ಮಾಡಿಕೊಳ್ಳುಲು ರೈತ
ಸಂಕರ್ಪ ಕೇಂದ್ರಗಳಾದ ಮುದ್ದೇಬಿಹಾಳ,ಢವಳಗಿ, ನಾಲತವಾಡ ಮತ್ತು ತಾಳಿಕೋಟಿಗೆ ಸಂಬಂಧಪಟ್ಟ ರೈತ ಬಾಂಧವರು ಇದರ ಸೌಲಭ್ಯವನ್ನು ಪಡೆಯಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ಸುರೇಶ ಭಾವಿಕಟ್ಟಿ ಅವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಅಥವಾ ತಾಲೂಕಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಭೇಟಿ ನೀಡಿ ಮಾಹಿತಿಯನ್ನು ರೈತರು
ಪಡೆದುಕೊಳ್ಳಲು ವಿನಂತಿಸಿದ್ದಾರೆ.