ಇಂಡಿ ಆದರ್ಶ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಅಹ್ವಾನ
ಇಂಡಿ : 2024-25 ನೇ ಸಾಲಿಗೆ ಸರಕಾರಿ ಆದರ್ಶ ವಿದ್ಯಾಲಯ ಇಂಡಿ ಶಾಲೆಗೆ ಆರನೇ ತರಗತಿ ದಾಖಲಾತಿಗಾಗಿ ನಡೆಸುವ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
2023-24 ನೇ ಸಾಲಿನಲ್ಲಿ ಇಂಡಿ ತಾಲೂಕಿನ ಸರಕಾರಿ, ಅನುದಾನಿತ ಐದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಹಾಗೂ ಇದೇ ತಾಲೂಕಿನ ಖಾಯಂ ನಿವಾಸಿಗಳ ಮಕ್ಕಳು, ಬೇರೆ ತಾಲೂಕು, ಜಿಲ್ಲೆ, ರಾಜ್ಯಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಗಳನ್ನು ಜನೇವರಿ 17 ರಿಂದ ಪೇಬ್ರುವರಿ 6 ರವರೆಗೆ ಸಲ್ಲಿಸಬಹುದು. ಪ್ರವೇಶ ಪರೀಕ್ಷೆ ಮಾರ್ಚ 3ರಂದು ನಡೆಯುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್ ಆಲಗೂರ ಹಾಗೂ ಮುಖ್ಯೋಪಾಧ್ಯಾಯ ಎಸ್.ಜಿ.ಬನಸೋಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆನ್‌ಲೈನ್‌ನಲ್ಲಿ ಅರ್ಜಿಗಳನ್ನು www.schooleducation.kar. nic.in, www.vidyavahini. karnataka.gov.in ವೆಬ್ ಸೈಟ್ ನಲ್ಲಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು: ಎ000ಟಿಎಸ್ ನಂಬರ, ವಿದ್ಯಾರ್ಥಿಯ ಇತ್ತೀಚಿನ ಪಾಸ್‌ಪೋರ್ಟ್ ಸೈಜಿನ ಭಾವಚಿತ್ರ,
ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿಯ ಆಧಾರಕಾರ್ಡ, ವಿದ್ಯಾರ್ಥಿಯ ವ್ಯಾಸಂಗ ಪ್ರಮಾಣ ಪತ್ರ (ಬೇರೆ ತಾಲೂಕು, ಜಿಲ್ಲೆ, ರಾಜ್ಯಗಳಲ್ಲಿ ಓದುತ್ತಿರುವ ಮಕ್ಕಳಿಗೆ ಮಾತ್ರ), ವಾಸಸ್ಥಳ ದೃಢೀಕರಣ ಪತ್ರ (ಬೇರೆ ತಾಲೂಕು, ಜಿಲ್ಲೆ, ರಾಜ್ಯಗಳಲ್ಲಿ ಓದುತ್ತಿರುವ ಮಕ್ಕಳಿಗೆ ಮಾತ್ರ), ವಿಶೇಷ ಅಗತ್ಯವುಳ್ಳ ಮಕ್ಕಳ ವೈದ್ಯಕೀಯ ಪ್ರಮಾಣ ಪತ್ರ, ಪಾಲಕರು ತಮ್ಮ ಚಾಲ್ತಿ ಸ್ವಂತ ಮೋಬೈಲ್ ಸಂಖ್ಯೆಯನ್ನು ಅರ್ಜಿಯಲ್ಲಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಮುಖ್ಯೋಪಾಧ್ಯಾಯ ಆದರ್ಶ ವಿದ್ಯಾಲಯ ಇಂಡಿ 8970716054, 6360904885 ಈ ಸಂಖ್ಯೆಗಳನ್ನು ಸಂಪರ್ಕಿಸಬಹುದು.