‘”ಶ್ರೀ ನಾಡಪ್ರಭು ಕೆಂಪೇಗೌಡ ವೃತ್ತ ಎಂದು ಹೆಸರಿಡಲು ಅನುಮೋದನೆ'”
ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮಲೆ ಮಹದೇಶ್ವರ ಬೆಟ್ಟ ರಸ್ತೆ, ರಾಮಾಪುರ ರಸ್ತೆ, ಎಲ್ಲೇಮಾಳ ರಸ್ತೆಯ ವೃತ್ತಕ್ಕೆ ಹಿಂದೆ ನಡೆದ ಸಭೆಯ ನಡವಳಿಯಂತೆ ಶ್ರೀ ನಾಡಪ್ರಭು ಕೆಂಪೇಗೌಡ ವೃತ್ತ ಎಂದು ಹೆಸರಿಡಲು ಅನುಮೋದನೆಯನ್ನು ನೀಡಲಾಗಿದೆ ಎಂದು ಶಾಸಕ ಎಂಆರ್ ಮಂಜುನಾಥ್ ಅವರು ತಿಳಿಸಿದರು.
ಹನೂರು ಪಟ್ಟಣ ಪಂಚಾಯತಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಮಾನ್ಯ ಸಭೆಯಲ್ಲಿ ಶಾಸಕ ಎಂಆರ್ ಮಂಜುನಾಥ್ ರವರು ಮಾತನಾಡಿ, ಪಟ್ಟಣದ ಪೆಟ್ರೋಲ್ ಬಂಕ್ ಮುಂಭಾಗದ ರಾಮಾಪುರ ರಸ್ತೆ ಹಾಗೂ ಎಲ್ಲೇಮಾಳ ರಸ್ತೆಯ ವೃತ್ತಕ್ಕೆ ಶ್ರೀ ನಾಡಪ್ರಭು ಕೆಂಪೇಗೌಡರ ವೃತ್ತ ನಿರ್ಮಿಸಲು ಜುಲೈ 30, 2022ರಂದು ನಡೆದ ಕೌನ್ಸಿಲ್ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅದರಂತೆ ಕ್ರಮವಹಿಸಲು, ಈ ಸಭೆಯಲ್ಲಿ ಅನುಮೋದನೆಯನ್ನು ನೀಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿಯ
ಆಡಳಿತಾಧಿಕಾರಿ ವೈ ಕೆ ಗುರುಪ್ರಸಾದ್, ಪಟ್ಟಣ ಪಂಚಾಯತಿಯ ಮುಖ್ಯ ಅಧಿಕಾರಿ ಮಹೇಶ್, ಪಟ್ಟಣ ಪಂಚಾಯತಿಯ ಎಲ್ಲಾ ಸದಸ್ಯರುಗಳು ಉಪಸ್ಥಿತರಿದ್ದರು.
ವರದಿ: ಚೇತನ್ ಕುಮಾರ್ ಎಲ್, ಹನೂರು ತಾಲೂಕು, ಚಾಮರಾಜನಗರ ಜಿಲ್ಲೆ.