ವಿಜಯಪುರ : ದೇಶದ ಪ್ರಧಾನಿ ನರೇಂದ್ರ ಮೋದಿರವರ ನೇತೃತ್ವದ ಕೇಂದ್ರ ಸರ್ಕಾರ ದೇಶವನ್ನು ಅತ್ಯುತ್ತಮವಾಗಿ ಮುನ್ನಡೆಸುತ್ತಿರುವುದನ್ನು ಸೂಕ್ಷ್ಮವಾಗಿ ಗಮನಿಸಿದ ಮೂರು ರಾಜ್ಯಗಳ ಮತದಾರರು ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ನಂಬಿಕೆ ಮತ್ತು ವಿಶ್ವಾಸ ಇಟ್ಟು ಮೂರು ರಾಜ್ಯಗಳಲ್ಲಿ ಬಿಜೆಪಿ ಪಕ್ಷಕ್ಕೆ ಅಭೂತಪೂರ್ವ ಬೆಂಬಲ ಸೂಚಿಸಿದ್ದಾರೆ, ಇದು ಮುಂಬರುವ ಲೋಕಸಭಾ ಚುನಾವಣೆಗೆ ಮುನ್ನುಡಿ ಬರೆಯಲಿದೆ. ಬಿಜೆಪಿ ಕಾರ್ಯಕರ್ತರು ಮೂರು ರಾಜ್ಯಗಳ ಫಲಿತಾಂಶ ಕಂಡು ಮತ್ತಷ್ಟು ಗಟ್ಟಿಯಾಗಿದ್ದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಪಕ್ಷ ಅಭೂತಪೂರ್ವ ಜಯ ಸಾಧಿಸಲಿದೆ.
ರವಿ ಖಾನಾಪೂರ ಬಿಜೆಪಿ ಜಿಲ್ಲಾ ಮುಖಂಡರು. ವಿಜಯಪುರ