ಸಿಂಧನೂರು: ಮೋಸ ಮತ್ತು ಕಳ್ಳತನದಿಂದ ಎಟಿಎಂ ಕಾರ್ಡ್ ಬದಲಾವಣೆ ಮಾಡಿ ಹಣ ಡ್ರಾ ಮಾಡಿಕೊಂಡು ಜನರನ್ನು ಯಾಮಾರಿಸುತ್ತಿದ್ದ ಎಟಿಎಂ ಕಳ್ಳನನ್ನು ಬಂಧಿಸುವಲ್ಲಿ ನಗರ ಪೊಲೀಸ್ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಕೋಲಾರ ಜಿಲ್ಲೆಯ ಅರಕುಂಟಿ ಗ್ರಾಮದ ನಾರಾಯಣಪ್ಪ ಬಂಧಿತ ಆರೋಪಿ. ಡಿವೈಎಸ್ಪಿ ವೆಂಕಟಪ್ಪ ನಾಯಕ ನೇತೃತ್ವದಲ್ಲಿ 10 ಜನರ ತಂಡವನ್ನು ರಚಿಸಿ ಎಟಿಎಂ ಕಳ್ಳನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.