• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಗುಡುಗು ಮತ್ತು ಸಿಡಿಲಿನ ಅಪಾಯ ತಪ್ಪಿಸಲು ಪ್ರಾಧಿಕಾರದ  ಸಲಹೆ-ಸೂಚನೆ ಪಾಲಿಸಿ : ಜಿಲ್ಲಾಧಿಕಾರಿ ಭೂಬಾಲನ್

      Voiceofjanata.in

      May 22, 2025
      0
      ಗುಡುಗು ಮತ್ತು ಸಿಡಿಲಿನ ಅಪಾಯ ತಪ್ಪಿಸಲು ಪ್ರಾಧಿಕಾರದ  ಸಲಹೆ-ಸೂಚನೆ ಪಾಲಿಸಿ : ಜಿಲ್ಲಾಧಿಕಾರಿ ಭೂಬಾಲನ್
      0
      SHARES
      43
      VIEWS
      Share on FacebookShare on TwitterShare on whatsappShare on telegramShare on Mail

      ಗುಡುಗು ಮತ್ತು ಸಿಡಿಲಿನ ಅಪಾಯ ತಪ್ಪಿಸಲು ಪ್ರಾಧಿಕಾರದ  ಸಲಹೆ-ಸೂಚನೆ ಪಾಲಿಸಿ : ಜಿಲ್ಲಾಧಿಕಾರಿ ಭೂಬಾಲನ್

      ವಿಜಯಪುರ : ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ನೀಡಲಾದ ಸಲಹೆ-ಸೂಚನೆಗಳನ್ನು ಜಿಲ್ಲೆಯಾದ್ಯಂತ ಪಾಲಿಸುವಂತೆ ಹಾಗೂ ಸಾರ್ವಜನಿಕರಿಗೆ ಅಗತ್ಯ ಜಾಗೃತಿ ಮೂಡಿಸುವ ಮೂಲಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.

      ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಮಳೆಯಿಂದಾಗುವ ಹಾನಿ ತಡೆಗಟ್ಟಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮದ ಕುರಿತು ಎಲ್ಲಾ ತಾಲೂಕಿನಿಂದ ನಡೆದ ವಿಡಿಯೋ ಸಂವಾದ ಸಭೆಯಲ್ಲಿ ಈ ಸೂಚನೆ ನೀಡಿದರು.ಗುಡುಗು ಮತ್ತು ಸಿಡಿಲಿನ ಅಪಾಯ ತಗ್ಗಿಸಲು ಸಾಮಾನ್ಯವಾಗಿ ಸಿಡಿಲಿಗೆ ತುತ್ತಾಗುವ ಸ್ಥಳಗಳನ್ನು ಗುರುತಿಸಿ, ಸಾರ್ವಜನಿಕ ಆಸ್ತಿ, ಮೂಲಸೌಕರ್ಯಗಳ ರಕ್ಷಣೆಗೆ ಕ್ರಮ ವಹಿಸಬೇಕು. ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಾಗೂ ಇಂಡಿಯನ್ ಮೆಟ್ರಾಲಾಜಿಕಲ್ ಇಲಾಖೆಯ ಸಿಡಿಲಿನ ಮುನ್ಸೂಚನೆಗಳನ್ನು ಸ್ಥಳೀಯ ಮಟ್ಟಕ್ಕೆ ತಲುಪಿಸಲು ಸಾಮಾಜಿಕ ಮತ್ತು ಇತರ ಸಮೂಹ ಮಾಧ್ಯಮಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ತಿಳುವಳಿಕೆ ಮೂಡಿಸುವುದು ಹಾಗೂ ಈ ಕುರಿತು ರೈತ ಸಂಪರ್ಕ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಪಶು ವೈದ್ಯಕೀಯ ಚಿಕಿತ್ಸಾ ಕೇಂದ್ರಗಳು ಹಾಗೂ ಗ್ರಾಮ ಪಂಚಾಯತಿಗಳ ಮೂಲಕ ಮಾಹಿತಿ ನೀಡುವುದು ಮತ್ತು ಜಾಗೃತಿ ಮೂಡಿಸುವುದು.
      ಸ್ಥಳೀಯ ಜನರನ್ನು ಎಚ್ಚರಿಸಲು ಹಾಗೂ ಗುಡುಗು ಮತ್ತು ಸಿಡಿಲಿನ ಅಪಾಯಗಳನ್ನು ತಗ್ಗಿಸಲು ಸಲಹೆ ಸೂಚನೆಗಳನ್ನ ನೀಡಲು ಶಾಲೆ, ಕಾಲೇಜುಗಳು, ರೈತ ಸಂಪರ್ಕ ಕೇಂದ್ರ, ಪ್ರಾಥಮಿಕ ಪಶು ವೈದ್ಯಕೀಯ ಚಿಕಿತ್ಸಾ ಕೇಂದ್ರಗಳ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದು.

      ಕೃಷಿ ಇಲಾಖೆಯ ಅಧಿಕಾರಿ-ನೌಕರರು ರೈತ ಸಂಪರ್ಕ ಕೇಂದ್ರಗಳು, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಅಧಿಕಾರಿ-ಸಿಬ್ಬಂದಿಗಳು, ಗುಡುಗು ಸಿಡಿಲು ಸಂದರ್ಭದಲ್ಲಿ ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳ ಬಗ್ಗೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಕೃಷಿಕರಿಗೆ, ಕುರಿ ಮೇಕೆ ಹಾಗೂ ಇತರೆ ಜಾನುವಾರುಗಳ ಸಾಕಾಣಿಕೆದಾರರಿಗೆ ಸೂಕ್ತ ಅರಿವು ಮೂಡಿಸಬೇಕು ಎಂದು ಅವರು ಸೂಚನೆ ನೀಡಿದರು.
      ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಪಾಲಿಸಬೇಕಾದ ಸಲಹೆ ಸೂಚನೆ: ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಹಾಗೂ ಕಾಮನ್ ಅಲರ್ಟ್ ಪ್ರೋಟೋಕಾಲ್ ಮೂಲಕ ಬರುವ ಸಂದೇಶಗಳನ್ನು ಮೊಬೈಲ್ ನಲ್ಲಿ ಗಮನಿಸುವುದು, ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗದಿರುವುದು. ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತಲ್ಲ, ಸುರಕ್ಷಿತವಾದ ಕಟ್ಟಡಗಳ ಆಶ್ರಯ ಪಡೆಯುವುದು, ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು, ತಗ್ಗು ಪ್ರದೇಶದಲ್ಲಿ ಆಶ್ರಯ ಪಡೆಯುವುದು, ನೀರಿನ ಮೂಲಗಳಾದ ಕೆರೆ ಮತ್ತು ನದಿಗಳಿಂದ ದೂರವಿರುವುದು, ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸಬರಾಜು ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ್ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರುವುದು.

      ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯುವುದು, ಗುಂಪಿನಲ್ಲಿದ್ದರೆ ಅಪಾಯವನ್ನ ಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳುವುದು, ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಮಯವಿಲ್ಲದಿದ್ದರೆ ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳುವುದು, ವಿದ್ಯುತ್ ಅಥವಾ ಟೆಲಿಫೋನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು, ಅರಣ್ಯ ಪ್ರದೇಶದಲ್ಲಿದ್ದರೆ ಚಿಕ್ಕ-ಚಿಕ್ಕ ಮರಗಳ ಕೆಳಗೆ ಆಶ್ರಯ ಪಡೆಯುವುದು,ಲೋಹದ ವಸ್ತುಗಳು, ದ್ವಿಚಕ್ರ ವಾಹನ, ದೂರವಾಣಿ ಬಳಸಬಾರದು, ತಂತಿ ಬೇಲಿ ಯಂತ್ರಗಳಿAದ ದೂರವಿರುವುದು, ಕಬ್ಬಿಣದ ಸರಳುಗಳ್ಳುಳ್ಳ ಛತ್ರಿಗಳನ್ನು ಬಳಸಬಾರದು. ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ ಬೆಂಕಿ ಮತ್ತು ವಿದ್ಯುತ್ ಸಂಪರ್ಕದಿAದ ದೂರವಿರುವುದು, ಮಕ್ಕಳು ವಯೋವೃದ್ಧರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸಬೇಕು.

      ಗುಡುಗು ಸಿಡಿಲಿನ ಸಂದರ್ಭದಲ್ಲಿ ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಇತರೆ ಯಾವುದೇ ಅವಶೇಷಗಳನ್ನು ತೆಗೆದುಹಾಕಬಾರದು, ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ಹರಿಯುವ ಸಾಧ್ಯತೆ ಇರುವುದರಿಂದ ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಮತ್ತು ಶವರ ತೆಗೆದುಕೊಳ್ಳಬಾರದು, ಪಾತ್ರೆ ತೊಳೆಯಬಾರದು, ಬಟ್ಟೆ ಒಗೆಯಬಾರದು, ಆಟದ ಮೈದಾನ, ಉದ್ಯಾನವನಗಳು, ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸಬೇಕು. ಮಿಂಚಿನ ಒಡೆತದಿಂದಾಗಿ ಕಾಡ್ಗಿಚ್ಚು ಸಂಭವಿಸುವ ಸಾಧ್ಯತೆ ಇರುವುದರಿಂದ ಅರಣ್ಯ ಪ್ರದೇಶದಿಂದ ದೂರವಿದ್ದು ಗಿಡ ಗಡ್ಡೆಗಳಿಲ್ಲದ ಸ್ವಚ್ಛ ಪ್ರದೇಶದ ಕಡೆಗೆ ಚಲಿಸುವುದೂ ಸೇರಿದಂತೆ ವಿವಿಧ ಸಲಹೆಗಳನ್ನು ನೀಡಲಾಗಿದೆ.

      ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಇಂಡಿ ಉಪವಿಭಾಗಾಧಿಕಾರಿ ಶ್ರೀಮತಿ ಅನುರಾಧಾ ವಸ್ತçದ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #Authority's advice to avoid the risk of thunder and thunder: District Collector Bhubalan#indi / vijayapur#Public News#State News#Today News#Voice Of Janata#Voiceofjanata.in#ಗುಡುಗು ಮತ್ತು ಸಿಡಿಲಿನ ಅಪಾಯ ತಪ್ಪಿಸಲು ಪ್ರಾಧಿಕಾರದ  ಸಲಹೆ-ಸೂಚನೆ ಪಾಲಿಸಿ : ಜಿಲ್ಲಾಧಿಕಾರಿ ಭೂಬಾಲನ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.