ವಿಜಯಪುರ : ಗುಮ್ಮಟ ನಗರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ವಿಜಯಮಹಾಂತೇಶ ದಾನಮ್ಮನವರ ಅಧಿಕಾರ ಸ್ವೀಕರಿಸಿದರು. ಐಎಎಸ್ ಅಧಿಕಾರಿಯಾಗಿರುವ ವಿಜಯ ಮಹಾಂತೇಶ ದಾನಮ್ಮನವರ ಅವರನ್ನು ವರ್ಗಾವಣೆಗೊಂಡ ನಿರ್ಗಮಿತ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ಹೂಗುಚ್ಛ ನೀಡಿ ಆತ್ಮೀಯ ಸ್ವಾಗತ ಕೋರಿದರು. ಇದೇ ಸಂದರ್ಭದಲ್ಲಿ ಅಧಿಕಾರ ಹಸ್ತಾಂತರಿಸಿದರು. ಅಲ್ಲದೇ, ಕೊರೊನಾ ಹಾಗೂ ಪ್ರವಾಹವನ್ನು ಸಮರ್ಥವಾಗಿ ನಿಭಾಯಿಸಿ ಸಾರ್ವಜನಿಕರ ಪ್ರೀತಿಗೆ ಸುನೀಲಕುಮಾರ ಪಾತ್ರರಾಗಿದ್ದರು. ಈ ವೇಳೆಯಲ್ಲಿ ಜಿಲ್ಲಾಡಳಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.