• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಉಚಿತ ನೇತ್ರದಾನ ಹಾಗೂ ರಕ್ತದಾನ ಶಿಬಿರ..! ಯಾವಾಗ..?

    ಉಚಿತ ನೇತ್ರದಾನ ಹಾಗೂ ರಕ್ತದಾನ ಶಿಬಿರ..! ಯಾವಾಗ..?

    ಲಚ್ಯಾಣದಲ್ಲಿ ಪ್ರವಚನಕ್ಕೆ ಬಂದ ಭಕ್ತರಿಗೆ ನಿತ್ಯ ವಿಶೇಷ ಪ್ರಸಾದ

    ಲಚ್ಯಾಣದಲ್ಲಿ ಪ್ರವಚನಕ್ಕೆ ಬಂದ ಭಕ್ತರಿಗೆ ನಿತ್ಯ ವಿಶೇಷ ಪ್ರಸಾದ

    ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ಕುಡಿಯುವ ನೀರಿನ ಬಗ್ಗೆ ಎಚ್ಚರಿಕೆ ವಹಿಸಿ..! ಶಾಸಕ‌ ಪಾಟೀಲ

    ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ಕುಡಿಯುವ ನೀರಿನ ಬಗ್ಗೆ ಎಚ್ಚರಿಕೆ ವಹಿಸಿ..! ಶಾಸಕ‌ ಪಾಟೀಲ

    ಸಿದ್ದಲಿಂಗ ಶ್ರೀಗಳ ಪುಣ್ಯಸ್ಮರಣೆಯ ಶತಮಾನೋತ್ಸವ ಅದ್ದೂರಿಯಾಗಿ ಆಚರಿಸೋಣ..!

    ಸಿದ್ದಲಿಂಗ ಶ್ರೀಗಳ ಪುಣ್ಯಸ್ಮರಣೆಯ ಶತಮಾನೋತ್ಸವ ಅದ್ದೂರಿಯಾಗಿ ಆಚರಿಸೋಣ..!

    ವಾಲಿಬಾಲ್ ಕ್ರೀಡಾಕೂಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.!

    ವಾಲಿಬಾಲ್ ಕ್ರೀಡಾಕೂಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.!

    ಅಕ್ರಮ‌ ಪಡಿತರ ಸಾಗಾಟ..! ಒಬ್ವರ ಬಂದನ್..!

    ಅಕ್ರಮ‌ ಪಡಿತರ ಸಾಗಾಟ..! ಒಬ್ವರ ಬಂದನ್..!

    ಪದವಿಪೂರ್ವ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಬಾಚಿಕೊಂಡ ಕ್ರಿಸ್ತರಾಜ ಕಾಲೇಜು

    ಪದವಿಪೂರ್ವ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಬಾಚಿಕೊಂಡ ಕ್ರಿಸ್ತರಾಜ ಕಾಲೇಜು

    ಗ್ರಾಮಗಳ ಅಭಿವೃದ್ದಿಗೆ ಮೊದಲ ಆಧ್ಯತೆ – ಶಾಸಕ ಯಶವಂತರಾಯಗೌಡ

    ಗ್ರಾಮಗಳ ಅಭಿವೃದ್ದಿಗೆ ಮೊದಲ ಆಧ್ಯತೆ – ಶಾಸಕ ಯಶವಂತರಾಯಗೌಡ

    ಇಡೀ ಜಗತ್ತು ಮಹಾತ್ಮ ಗಾಂಧೀಜಿಯನ್ನು ಅನುಸರಿಸುತ್ತೆದೆ; ಆಬೀದ್ ಗದ್ಯಾಳ

    ಇಡೀ ಜಗತ್ತು ಮಹಾತ್ಮ ಗಾಂಧೀಜಿಯನ್ನು ಅನುಸರಿಸುತ್ತೆದೆ; ಆಬೀದ್ ಗದ್ಯಾಳ

    ವಿಶ್ವ ಭಾರತಿ ವಿಧ್ಯಾ ಕೇಂದ್ರದಲ್ಲಿ ಮಹಾತ್ಮ ಗಾಂಧಿಜಿ ಹಾಗೂ ಲಾಲ ಬಹದ್ದೂರ ಶಾಸ್ತ್ರಿ ಜಯಂತಿ..

    ವಿಶ್ವ ಭಾರತಿ ವಿಧ್ಯಾ ಕೇಂದ್ರದಲ್ಲಿ ಮಹಾತ್ಮ ಗಾಂಧಿಜಿ ಹಾಗೂ ಲಾಲ ಬಹದ್ದೂರ ಶಾಸ್ತ್ರಿ ಜಯಂತಿ..

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಜಯನಗರದ ಯುನೈಟೆಡ್‌ ಆಸ್ಪತ್ರೆಯಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಆಟೋಲೋಗಸ್ ಕಾರ್ಟಿಲೆಜ್ ಕಸಿ ಶಸ್ತ್ರಚಿಕಿತ್ಸೆ..

      July 23, 2022
      0
      ಜಯನಗರದ ಯುನೈಟೆಡ್‌ ಆಸ್ಪತ್ರೆಯಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಆಟೋಲೋಗಸ್ ಕಾರ್ಟಿಲೆಜ್ ಕಸಿ ಶಸ್ತ್ರಚಿಕಿತ್ಸೆ..
      0
      SHARES
      110
      VIEWS
      Share on FacebookShare on TwitterShare on whatsappShare on telegramShare on Mail

      – ಅತ್ಯಾಧುನಿಕ ವಿಧಾನದ ಶಸ್ತ್ರಚಿಕಿತ್ಸೆಯ ಮೂಲಕ ಕ್ಷೀಪ್ರವಾಗಿ ಚೇತರಿಸಿಕೊಂಡ ಕ್ರೀಡಾಪಟು

      ಬೆಂಗಳೂರು, ಜುಲೈ 23, 2022 : ಫುಟ್‌ಬಾಲ್‌ ಆಟದಲ್ಲಿ ಪಾದದ ಕಾರ್ಟಿಲೇಜ್‌ ಗೆ ಹಾನಿಮಾಡಿಕೊಂಡಿದ್ದ ಕ್ರೀಡಾಪುಟುವಿಗೆ ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ಅತ್ಯಾಧುನಿಕ ಆಟೋಲೋಗಸ್‌ ಕಾರ್ಟಿಲೇಜ್‌ ಕಸಿ ಶಸ್ತ್ರಚಿಕಿತ್ಸೆಯನ್ನ ಜಯನಗರದ ಯುನೈಟೆಡ್‌ ಆಸ್ಪತ್ರೆಯ ವೈದ್ಯರು ನೆರವೇರಿಸಿದ್ದಾರೆ.

      ರಾಜ್ಯದಲ್ಲೆ ಪ್ರಪ್ರಥಮ ಬಾರಿಗೆ ನಡೆಸಿದ ಈ ಅತ್ಯಾಧುನಿಕ ತಂತ್ರಜ್ಞಾನದ ಶಸ್ತ್ರಚಿಕಿತ್ಸೆಯ ಬಗ್ಗೆ ಆಸ್ಪತ್ರೆಯ ವೈದ್ಯರು ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

      ಇತ್ತೀಚಿಗೆ ಅಜಯ್ ಎಂಬ ಯುವ ಫುಟ್‌ಬಾಲ್ ಆಟಗಾರ ಫುಟ್‌ಬಾಲ್ ಪಂದ್ಯವೊಂದರಲ್ಲಿ ತನ್ನ ಪಾದಕ್ಕೆ ಗಾಯ ಮಾಡಿಕೊಂಡಿದ್ದರು. ಕೀಲುಗಳ ಕಾರ್ಟಿಲೆಜ್ ಸಮಸ್ಯೆಯನ್ನು ಸಾಮಾನ್ಯವಾಗಿ ಯಾವುದೇ ಶಸ್ತ್ರಚಿಕಿತ್ಸೆಗಳಿಲ್ಲದೆ ನಿವಾರಿಸಲಾಗುತ್ತದೆ. ದೀರ್ಘಕಾಲದ ವಿಶ್ರಾಂತಿ ತೆಗೆದುಕೊಳ್ಳುವುದು ಸಾಮಾನ್ಯವಾಗಿ ಭಾರತದಲ್ಲಿ ರೂಢಿಯಲ್ಲಿದೆ. ಆದರೆ ಇದು ಕ್ರೀಡಾಪಟುಗಳು ತಮ್ಮ ಚಟುವಟಿಕೆಗಳಲ್ಲಿ ಮುಂದುವರಿಯುವುದನ್ನು ತಡೆಯುತ್ತದೆ ಹಾಗೂ ನಿಧಾನವಾಗಿ ಚೇತರಿಸಿಕೊಳ್ಳುವ ಮೂಲಕ ತಮ್ಮ ಕ್ರೀಡಾ ಸಾಮರ್ಥ್ಯವನ್ನು ಮರಳಿ ಪಡೆದುಕೊಳ್ಳಲು ಬಹಳಷ್ಟು ಸಮಯಾವಕಾಶ ಬೇಡುತ್ತದೆ.

      ನೂತನ ವಿಧಾನದ ಶಸ್ತ್ರಚಿಕಿತ್ಸೆಯ ಬಗ್ಗೆ ವಿವರಿಸಿದ ಯುನೈಟೆಡ್‌ ಆಸ್ಪತ್ರೆಯ ಕನ್ಸಲ್ಟೆಂಟ್‌ ಆರ್ಥೋಪಿಡಿಶಿಯನ್‌ ಡಾ ಪ್ರದ್ಯುಮ್ನ ಆರ್‌ ಅವರು “ಅಥ್ಲೆಟಿಕ್ ನಲ್ಲಿ ಪಾಲ್ಗೊಳ್ಳುವ ಮಂದಿಗೆ ಕೀಲಿನ ಕಾರ್ಟಿಲೆಜ್ ಗಾಯಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಸಾಮಾನ್ಯವಾಗಿ ವೃತ್ತಿಪರ ಕ್ರೀಡಾಪಟುಗಳು ಮತ್ತು ಕ್ರೀಡಾ ಹವ್ಯಾಸಿಗಳು ಕಾರ್ಟಿಲೆಜ್ ಹಾನಿಗೆ ಗುರಿಯಾಗುತ್ತಾರೆ. ಇದು ಟ್ವಿಸ್ಟ್ ಮಾಡುವಾಗ, ಜಂಪ್ ಮಾಡುವಾಗ ಜಿಗಿಯುವಾಗ ಮೊಳಕಾಲನ್ನು ತೀವ್ರವಾಗಿ ಬಾಗಿಸಿದಾಗ ಅಥವಾ ಹಠಾತ್ ಆಘಾತಕಾರಿ ಗಾಯದಿಂದಾಗಿ ಈ ಸಮಸ್ಯೆ ಕಾಣಿಸಿಕೊಳ್ಳಬಹುದು. ಇದನ್ನು ಗುಣಪಡಿಸುವ ಸೀಮಿತ ಚಿಕಿತ್ಸೆಗಳಿಂದಾಗಿ, ನೋವು ಹೆಚ್ಚಾಗಿರುತ್ತದೆ. ಹೆಚ್ಚಿನ ಬಾರಿ ಇದು ಅಪೂರ್ಣ ಚಿಕಿತ್ಸೆಗೆ ಕಾರಣವಾಗುತ್ತದೆ. ಚಿಕಿತ್ಸೆ ನೀಡದೆ ಬಿಟ್ಟರೆ, ಕಾರ್ಟಿಲೆಜ್ ಗಾಯಗಳು ಪ್ರೊಗ್ರೆಸ್ಸಿವ್ ಕೊಂಡ್ರೊಜೆನಿಕ್ ನಷ್ಟಕ್ಕೆ ಕಾರಣವಾಗಬಹುದು ಅಥವಾ ಕಾಲಕ್ರಮೇಣ ಕಾರ್ಟಿಲೆಜ್ ಕಳೆದುಹೋಗಬಹುದು” ಎಂದು ಹೇಳಿದರು.

      ಕೇವಲ ಕೀಹೋಲ್ ಶಸ್ತ್ರಚಿಕಿತ್ಸೆಯ ಮೂಲಕ ರೋಗಿಗೆ ಒಂದೇ ಹಂತದ ಶಸ್ತ್ರಚಿಕಿತ್ಸೆ ಮಾಡಲಾಯಿತು. ಅಜಯ್ ಈಗ ಗುಣಮುಖವಾಗುವುದರ ಜೊತೆಗೆ ವ್ಯಾಯಾಮ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಸಹಜ ಸ್ಥಿತಿಗೆ ಕ್ಷೀಪ್ರವಾಗಿ ಮರಳುತ್ತಿದ್ದಾರೆ. ಶೀಘ್ರದಲ್ಲೇ ಅವರು ತಮ್ಮ ನೆಚ್ಚಿನ ಕ್ರೀಡೆಯನ್ನು ಮತ್ತೆ ಆಡಲು ಸಾಧ್ಯವಾಗುತ್ತದೆ” ಎಂದು ಯುನೈಟೆಡ್‌ ಆಸ್ಪತ್ರೆಯ ಕನ್ಸಲ್ಟೆಂಟ್‌ ಆರ್ಥೋಪಿಡಿಶಿಯನ್‌ ಡಾ ಪ್ರದ್ಯುಮ್ನ ಆರ್‌ ತಿಳಿಸಿದರು.

      ಯುನೈಟೆಡ್‌ ಆಸ್ಪತ್ರೆಯ ಸಂಸ್ಥಾಪಕರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಡಾ. ವಿಕ್ರಮ್‌ ಸಿದ್ದಾರೆಡ್ಡಿ ಮಾತನಾಡಿ, “ನೂತನ ವಿಧಾನದ ತಂತ್ರಜ್ಞಾನದಲ್ಲಿ ರೋಗಿಯ ಕೀಲಿನಿಂದ ಸಂಗ್ರಹಿಸಿದ ರೋಗಿಯ ಕಾರ್ಟಿಲೆಜ್ ಕೋಶಗಳನ್ನು ಬಳಸಿಕೊಳ್ಳಲಾಗುತ್ತದೆ. ಈ ಅಂಗಾಂಶವನ್ನು ರೋಗಿಯ ರಕ್ತದ ಪ್ರೋಟೀನ್ ಸಮೃದ್ಧ ಭಾಗದೊಂದಿಗೆ ಬೆರೆಸಿ ಜೆಲ್ ತರಹದ ವಸ್ತುವನ್ನು ರೂಪಿಸಿಕೊಳ್ಳಲಾಗುತ್ತದೆ. ಇದನ್ನು ನೋವಿರುವ ಜಾಗಗಳಿಗೆ ಹಾಕುವುದರ ಮೂಲಕ ಕೆಲವು ವಾರಗಳಲ್ಲಿ ಹೊಸ ಕಾರ್ಟಿಲೆಜ್ ಆಗಿ ಬೆಳೆಯಲು ಅನುವು ಮಾಡಿಕೊಡಲಾಗುತ್ತದೆ. ಇದರಿಂದ ಕೀಲುಗಳಿಗೆ ಹೆಚ್ಚಿನ ಹಾನಿಯಾಗುವುದನ್ನು ತಡೆಯಬಹುದು ಮತ್ತು ಕೀಲುಗಳಲ್ಲಿ ಸಂಧಿವಾತ ಹೆಚ್ಚುವುದನ್ನು ತಪ್ಪಿಸುತ್ತದೆ ಎಂದರು.

      “COVID ಸಾಂಕ್ರಾಮಿಕ ರೋಗದ ನಂತರ ತಮ್ಮ ಕ್ರೀಡಾ ಚಟುವಟಿಕೆಗಳಿಗೆ ಮತ್ತೆ ಮರಳಿರುವ ಹೆಚ್ಚಿನ ಮಂದಿ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಯುನೈಟೆಡ್ ಹಾಸ್ಪಿಟಲ್ ಬೆಂಗಳೂರಿನಲ್ಲಿ ಮೂಲಸೌಕರ್ಯ, ಉಪಕರಣಗಳು, ಆಪರೇಷನ್ ಥಿಯೇಟರ್‌ಗಳು, ತರಬೇತಿ ಪಡೆದ ಸಿಬ್ಬಂದಿ, ರೋಗಿಗಳ ಯೋಗಕ್ಷೇಮಕ್ಕೆ ಮೀಸಲಾದ ನಿರ್ವಹಣೆ ಮತ್ತು ಭಾರತದ ಮೊದಲ ಆಟೋಲೋಗಸ್ ಕಾರ್ಟಿಲೆಜ್ ಟ್ರಾನ್ಸ್‌ಪ್ಲಾಂಟ್‌ ಸೌಲಭ್ಯಗಳ ಮೂಲಕ ಬೆಂಗಳೂರಿನ ಅತ್ಯುತ್ತಮ ಕ್ರೀಡೆ ಸಂಬಂಧಿತ ಗಾಯಗಳಿಗೆ ಚಿಕಿತ್ಸೆ ನೀಡುವ ಸುಸಜ್ಜಿತ ಆಸ್ಪತ್ರೆಗಳಲ್ಲಿ ಒಂದಾಗಿದೆ. ಕ್ರೀಡಾ ಸಮಸ್ಯೆಗಳ ನಿವಾರಣೆಗೆ ಇದೊಂದು ಉತ್ತಮವಾದ ಸ್ಥಳ” ಎಂದು ಜಯನಗರದ ಯುನೈಟೆಡ್ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಡಯಾಗ್ನೋಸ್ಟಿಕ್ ಮತ್ತು ವೆಲ್ನೆಸ್ ಮುಖ್ಯಸ್ಥ ಡಾ. ಶಾಂತಕುಮಾರ್ ಮುರುಡಾ ಹೇಳಿದರು.

      “ಯುನೈಟೆಡ್ ಆಸ್ಪತ್ರೆಯಲ್ಲಿ ಎಲ್ಲಾ ಕ್ರೀಡೆಗಳಿಗೆ ಸಂಬಂಧಿಸಿದ ಗಾಯಗಳಿಗೆ ಚಿಕಿತ್ಸೆ ನೀಡಲು ವಿಶ್ವದ ಅತ್ಯುತ್ತಮ ತಂತ್ರಗಳನ್ನು ಬಳಸಲಾಗುತ್ತದೆ. ಆಟೋಲೋಗಸ್ ಕಾರ್ಟಿಲೆಜ್ ಟ್ರಾನ್ಸ್‌ಪ್ಲಾಂಟ್ ಅನ್ನು ಒಂದೇ ಸೆಟ್ಟಿಂಗ್‌ನಲ್ಲಿ ಮಾಡಲಾಗುತ್ತದೆ, ಕೀಹೋಲ್ ಶಸ್ತ್ರಚಿಕಿತ್ಸೆ, ಸಾಂಪ್ರದಾಯಿಕ ಆರು ವಾರಗಳ ಅಂತರದಲ್ಲಿ ನಡೆಯುವ ಎರಡು ACI ಗಿಂತ ಕಡಿಮೆ ವೆಚ್ಚದಾಯಕವಾಗಿದೆ ಮತ್ತು ರೋಗಿಗೆ ಅನುಕೂಲಕರವಾಗಿದೆ” ಎಂದು ಡಾ ಮುರುಡಾ ವಿವರಿಸಿದರು.

      ಹಲವಾರು ವೈದ್ಯರನ್ನು ಭೇಟಿ ಮಾಡಿದ ಬಳಿಕ ಯುನೈಟೆಡ್ ಆಸ್ಪತ್ರೆಯ ಕನ್ಸಲ್ಟೆಂಟ್ ಆರ್ಥೋಪೆಡಿಶಿಯನ್ ಡಾ.ಪ್ರದ್ಯುಮ್ನ ಅವರನ್ನು ಭೇಟಿಯಾದೆ. ನನ್ನ ಪಾದದ ಕಾರ್ಟಿಲೇಜ್ ಹಾನಿಗೊಳಗಾಗಿದ್ದನ್ನ ಕಂಡು ವೈದ್ಯರಾದ ಪ್ರದ್ಯುಮ್ನ ಅವರು ಆರ್ಥೋಸ್ಕೊಪಿ ಮೂಲಕ ಆಟೋಲೋಗಸ್ ಕಾರ್ಟಿಲೆಜ್ ಕಸಿ ಮಾಡಲು ನಿರ್ಧರಿಸಿದರು. ಕಡಿಮೆ ಇನ್ ವೇಸಿವ್ ಸರ್ಜರಿ (ಕೀಹೋಲ್) ಮೂಲಕ ಹಾನಿಗೊಳಗಾದ ಕಾರ್ಟಿಲೆಜ್ ಗೆ ಚಿಕಿತ್ಸೆ ನೀಡಲು ನಿರ್ಧರಿಸಿದರು. ಇದರಿಂದ ಒಂದೇ ಶಸ್ತ್ರಚಿಕಿತ್ಸೆಯ ಮೂಲಕ ನನ್ನ ಗಾಯಕ್ಕೆ ಸೂಕ್ತ ಚಿಕಿತ್ಸೆಯನ್ನು ಪಡೆದುಕೊಳ್ಳಲು ಸಾಧ್ಯವಾಯಿತು ಎಂದು ಶಸ್ತ್ರಚಿಕಿತ್ಸೆಗೆ ಒಳಪಟ್ಟ ಕ್ರೀಡಾಪಟು ಅಜಯ್‌ ಹೇಳಿದರು.

      For More Information
      Dr. Shanthakumar Muruda
      M: 98450 74531

      Tags: #Autologus kartilogy surgeryBangalore
      voice of janata

      voice of janata

      • Trending
      • Comments
      • Latest
      ಕೊಟ್ಟ ಮಾತಿಗೆ ತಪ್ಪಿಲ್ಲ..!

      ಕೊಟ್ಟ ಮಾತಿಗೆ ತಪ್ಪಿಲ್ಲ..!

      March 25, 2023
      ಇಂಡಿ ಪಟ್ಟಣದಲ್ಲಿ ಬೇಕರಿ ಮಾಲಿಕ ಕಿಡ್ನಾಪ್ !..

      ಇಂಡಿ ಪಟ್ಟಣದಲ್ಲಿ ಬೇಕರಿ ಮಾಲಿಕ ಕಿಡ್ನಾಪ್ !..

      February 22, 2022
      ಪಿಯು ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಯಡವಟ್ಟು..

      ಪಿಯು ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಯಡವಟ್ಟು..

      March 13, 2023
      ಉಚಿತ ನೇತ್ರದಾನ ಹಾಗೂ ರಕ್ತದಾನ ಶಿಬಿರ..! ಯಾವಾಗ..?

      ಉಚಿತ ನೇತ್ರದಾನ ಹಾಗೂ ರಕ್ತದಾನ ಶಿಬಿರ..! ಯಾವಾಗ..?

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಉಚಿತ ನೇತ್ರದಾನ ಹಾಗೂ ರಕ್ತದಾನ ಶಿಬಿರ..! ಯಾವಾಗ..?

      ಉಚಿತ ನೇತ್ರದಾನ ಹಾಗೂ ರಕ್ತದಾನ ಶಿಬಿರ..! ಯಾವಾಗ..?

      October 3, 2023
      ಲಚ್ಯಾಣದಲ್ಲಿ ಪ್ರವಚನಕ್ಕೆ ಬಂದ ಭಕ್ತರಿಗೆ ನಿತ್ಯ ವಿಶೇಷ ಪ್ರಸಾದ

      ಲಚ್ಯಾಣದಲ್ಲಿ ಪ್ರವಚನಕ್ಕೆ ಬಂದ ಭಕ್ತರಿಗೆ ನಿತ್ಯ ವಿಶೇಷ ಪ್ರಸಾದ

      October 3, 2023
      ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ಕುಡಿಯುವ ನೀರಿನ ಬಗ್ಗೆ ಎಚ್ಚರಿಕೆ ವಹಿಸಿ..! ಶಾಸಕ‌ ಪಾಟೀಲ

      ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ಕುಡಿಯುವ ನೀರಿನ ಬಗ್ಗೆ ಎಚ್ಚರಿಕೆ ವಹಿಸಿ..! ಶಾಸಕ‌ ಪಾಟೀಲ

      October 3, 2023
      • About Us
      • Contact Us
      • Privacy Policy

      © 2022 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2022 VOJNews - Powered By Kalahamsa Infotech Private Limited.