ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಸಂವಿಧಾನ ದಿನ ಆಚರಣೆ..!
ವಿಜಯಪುರ, ನ. 26: ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಮಹಾವಿದ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಮತ್ತು ರಾಷ್ಟ್ರ ಪಿತಾಮಹ ಮಹಾತ್ಮಾ ಗಾಂಧೀಜಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಇಂದು ಮಂಗಳವಾರ ಸಂವಿಧಾನ ದಿನ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ರಘುವೀರ ಕುಲಕರ್ಣಿ ಅವರು ಸಂವಿಧಾನದ ದಿನಾಚರಣೆಯ ಮಹತ್ವ ಮತ್ತು ಸಂವಿಧಾನ ಪೀಠಿಕೆ ಕುರಿತು ಮಾತನಾಡಿದರು.
ಅಧ್ಯಾಪಕಿ ಸನಾ ಮುಗಲೈ ಅವರು ನಾಗರಿಕ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಕಾಪಾಡುವಲ್ಲಿ ಸಂವಿಧಾನದ ಪ್ರಾಮುಖ್ಯತೆ ಕುರಿತು ಭಾಷಣ ಮಾಡಿದರು.
ಸಹಾಯಕ ಪ್ರಾಧ್ಯಾಪಕ ಶೇಷಾದ್ರಿ ಕೆ. ಅವರು ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆ ಬೋಧಿಸಿ ಪ್ರಮಾಣ ವಚನ ಕಾರ್ಯಕ್ರಮ ನಡೆಸಿದರು.
ಸಹಾಯಕ ಪ್ರಾದ್ಯಾಪಕಿ ಲಾವಣ್ಯಾ ಕುಲಕರ್ಣಿ ಸ್ವಾಗತಿಸಿದರು. ಮಂಜುನಾಥ ಸಂಗೊಳ್ಳಿ ಅವರು ಎಲ್ಲರಿಗೂ ವಂದಿಸಿದರು.
ಸಂವಿಧಾನ ದಿನದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಭಾರತೀಯ ಸಂವಿಧಾನದ ಪ್ರಾಮುಖ್ಯತೆ ಕುರಿತು ಪ್ರಬಂಧ ಸ್ಪರ್ದೆಯನ್ನು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಕಾನೂನು ಮಹಾವಿದ್ಯಾಲಯದ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸಂವಿಧಾನ ದಿನಾಚರಣೆ: ವಿಜಯಪುರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಮಹಾವಿದ್ಯಾಲಯದಲ್ಲಿ ಸಂವಿಧಾನ ದಿನ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ರಘುವೀರ ಕುಲಕರ್ಣಿ, ಶೇಷಾದ್ರಿ ಕೆ., ಸನಾ ಮುಗಲೈ ಮುಂತಾದವರು ಉಪಸ್ಥಿತರಿದ್ದರು.