ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಇಂದು ಹರ್ ಘರ್ ತಿರಂಗಾ ರ‍್ಯಾಲಿ..!
ವಿಜಯಪುರ: ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಇಂದು ಮಂಗಳವಾರ ಹರ್ ಘರ್ ತಿರಂಗಾ ರ‍್ಯಾಲಿ ನಡೆಯಿತು.
ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಅವರು ತಿರಂಗಾ ರ‍್ಯಾಲಿಗೆ ಚಾಲನೆ ನೀಡಿದರು.
ಈ ರ‍್ಯಾಲಿಯು ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಮುಂಭಾಗದ ಸೋಲಾಪೂರ ರಸ್ತೆಯಿಂದ 770 ಲಿಂಗದ ದೇವಸ್ಥಾನ, ಸಂಗನಬಸವ ಕಲ್ಯಾಣ ಮಂಟಪ ಮಾರ್ಗವಾಗಿ ಬಿ.ಎಲ್.ಡಿ.ಇ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಏನ್.ಆರ್.ಐ ಹಾಸ್ಟೇಲ್ ಮಾರ್ಗವಾಗಿ ಮರಳಿ ವಿಶ್ವವಿದ್ಯಾಲಯದಲ್ಲಿ ಮುಕ್ತಾಯವಾಯಿತು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ವೈದ್ಯಕೀಯ ವಿದ್ಯಾರ್ಥಿಗಳು, ಸ್ಕೂಲ್ ಆಫ್ ಅಲೈಡ್ ಹೆಲ್ತ್ ಸಾಯಿನ್ಸಸ್, ಭೌತಚಿಕಿತ್ಸೆ ಶಾಲೆ ಹಾಗೂ ಕಾನೂನು ಶಾಲೆಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.