ಗರ್ಭಿಣಿಯ ಮಗು ಸಾವು, ಆಸ್ಪತ್ರೆಯ ವಿರುದ್ಧ ಕೇಸ್ ದಾಖಲು..!
ಇಂಡಿ : ಖಾಸಗಿ ಆಸ್ಪತ್ರೆಯ ನಿರ್ಲಕ್ಷ್ಯದಿಂದ ಗರ್ಭಿಣಿಯ ಮಗು ಅಸುನೀಗಿದೆ ಎಂದು ಪೊಲೀಸ ಕೇಸ್ ದಾಖಲು ಆಗಿದೆ. ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಗಜಾಕೋಶ ಆಸ್ಪತ್ರೆಯ ವಿರುದ್ಧ ದೂರು ದಾಖಲಾಗಿದ್ದು, ಆಸ್ಪತ್ರೆಯ ಸಿಬ್ಬಂದಿಗಳು, ವೈದ್ಯರ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿದೆ ಎಂದು ಶಿವಾನಂದ ದಶವಂತ ದೂರು ನೀಡಿದ್ದಾರೆ. ಅಲ್ಲದೇ, ಗಜಾಕೋಶ ಆಸ್ಪತ್ರೆಯ ಸ್ವಚ್ಚತಾ ಸಿಬ್ಬಂದಿಗಳು ಚಿಕಿತ್ಸೆ ನೀಡಿದ್ದಾರೆ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಈ ಕುರಿತು ಇಂಡಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.