ವಿಜಯಪುರ: ಆಕಸ್ಮಿಕ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೇಕರಿ ಅಂಗಡಿ ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ನಡೆದಿದೆ. ನ್ಯೂ ಹಾಸನ ಬೇಕರಿಯಲ್ಲಿ ಬೆಂಕಿ ಅವಘಡದಿಂದ ಲಕ್ಷಾಂತರ ಮೌಲ್ಯದ ವಸ್ತುಗಳು ಹಾನಿಯಾಗಿದೆ. ಅಲ್ಲದೇ, ಬೇಕರಿ ಅಂಗಡಿಯಲ್ಲಿದ್ದ ವಸ್ತುಗಳು ಸುಟ್ಟು ಕರಕಲವಾಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಘಟನೆ ನಿಡಗುಂದಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.