ಮಸ್ಕಿ: ತ್ಯಾಜ್ಯ ನಿರ್ವಹಣೆ ಅನುಸರಣೆ ಪ್ಲಾಸ್ಟಿಕ್ ಬಳಕೆ ನಿಷೇಧಿಸಿ 2021 ರ ಕರ್ನಾಟಕ ಸರ್ಕಾರದ ಅಧಿಸೂಚನೆ ಅನ್ವಯಿಸುವಂತೆ ನಮ್ಮ ಪುರಸಭೆ ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನೆ ಮತ್ತು ಸಂಗ್ರಹಣೆ ಮಾರಾಟ ಹಾಗೂ ವಿತರಣೆ ಬಳಕೆಯನ್ನು ಸರ್ಕಾರದ ಅಧಿಸೂಚನೆ ಸೂಚನೆಯಂತೆ ಜುಲೈ 01 ರಿಂದ ನಿಷೇಧಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಹನುಮಂತಮ್ಮ ನಾಯಕ ತಿಳಿಸಿದರು.
ಪಟ್ಟಣದಲ್ಲಿರುವ ವ್ಯಾಪಾರಸ್ಥರು ನಾಗರಿಕರು ಸೇರಿದಂತೆ ಎಲ್ಲರೂ ಸಹಕರಿಸುವಂತೆ ಜನತೆಯಲ್ಲಿ ಮನವಿ ಮಾಡಿಕೊಂಡ ಅವರು ಸರ್ಕಾರದ ನಿಯಮಗಳನ್ನು ಮೀರಿ ಯಾರಾದರೂ ಪ್ಲಾಸ್ಟಿಕ್ ಬಳಕೆಗೆ ಮುಂದಾದಲ್ಲಿ ಅಂಥವರ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.