ಕಾರು ಚಾಲಕ ಸಾವಿನ ಬಗ್ಗೆ ಸಚಿವ ಮುರುಘೇಶ ನಿರಾಣಿ ಹೇಳಿಕೆ ಹಿನ್ನೆಲೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಿಎಂ ಬಸವರಾಜ್ ಬೊಮ್ಮಾಯಿಗೆ ರವಿವಾರ ಪತ್ರ ಬರೆದಿದ್ದಾರೆ. ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕು. ಆರೋಪ ಮಾಡಿರುವ ಬಗ್ಗೆ ಸತ್ಯಾಸತ್ಯತೆ ತಿಳಿಯಲಿ.
ಇಂತಹ ಆರೋಪದಿಂದ ಸರಕಾರದ ಬಗ್ಗೆ ತಪ್ಪು ಸಂದೇಶ ಬರುತ್ತದೆ. ದೇಶದ ಜನತೆಗೆ ಇದರ ಬಗ್ಗೆ ಸತ್ಯಾಸತ್ಯತೇ ಗೊತ್ತಾಗಬೇಕಿದೆ. 24 ಗಂಟೆಯ ಒಳಗಾಗಿ ಸಿಬಿಐ ತನಿಖೆಗೆ ಶಿಫಾರಸು ಮಾಡಬೇಕು. ಅಲ್ಲದೇ, ಸುಳ್ಳು ಆರೋಪ ಮಾಡಿದ ಸಚಿವರನ್ನು ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ.