ಬಸವಣ್ಣನವರು ಕರ್ನಾಟಕದ ಸಾಂಸ್ಕೃತಿಕ ನಾಯಕ
ಇಂಡಿ : 12ನೇ ಶತಮಾನದಲ್ಲಿ ಕಲ್ಯಾಣದಲ್ಲಿ ಅನುಭವ ಮಂಟಪವನ್ನು ಸ್ಥಾಪನೆ ಮಾಡಿ, ಸರ್ವರೂ ಸಮಾನರು, ಎಲ್ಲರಿಗೂ ಸಾಮಾಜಿಕ ನ್ಯಾಯ ಸಿಗಬೇಕು ಎಂದು ಸಾರಿದ ಬಸವಣ್ಣನವರ ವಿಚಾರಗಳು ಇಂದಿಗೂ ಆದರ್ಶವಾಗಿವೆ.
ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಸರ್ಕಾರ ಜೊತೆಗೆ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಹಾಕುವುದು ಕಡ್ಡಾಯವಾಗಿಗೊಳಿಸಿ ಆದೇಶ ಹೊರಡಿಸಿರುವುದು ಸಂತಸ ತಂದಿದೆ ಎಂದು ಬಿಜೆಪಿ ಯುವ ಮುಖಂಡರಾದ ನಾಗೇಶ ಹೆಗಡ್ಯಾಳ ಅವರು ಹರ್ಷ ವ್ಯಕ್ತಪಡಿಸಿದರು.