ಇಂದಿನಿಂದ ಬೆಳಗಾವಿ ಸುವರ್ಣ ಸೌಧದಲ್ಲಿ ವಿಧಾನ ಮಂಡಲ ಅಧಿವೇಶನ..
Voice Of Janata DesK News : ವಿಧಾನ ಮಂಡಲ ಅಧಿವೇಶನ : ಬೆಳಗಾವಿ :
ಬೆಳಗಾವಿ: ವಿಧಾನಮಂಡಲದ ಚಳಿಗಾಲ ಅಧಿವೇಶನ ಕುಂದಾನಗರಿ ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಆರಂಭವಾಗಲಿದ್ದು, ಅಧಿವೇಶನ ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಸಿದ್ದತೆಗಳನ್ನು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಭಾನುವಾರ ಪರಿಶೀಲನೆ ನಡೆಸಿದರು.
ಸುವರ್ಣಸೌಧದಲ್ಲಿ ಕೈಗೊಂಡಿರುವ ಸಿದ್ಧತೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಅಗತ್ಯ ಸಲಹೆ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದರು.
ಸುವರ್ಣಸೌಧದ ಪ್ರವೇಶ ದ್ವಾರಗಳಲ್ಲಿನ ಸಿದ್ದತೆ, ವಿಧಾನಸಭಾ ಸದನ, ವಿಧಾನ ಪರಿಷತ್ ಸದನಗಳನ್ನು ವೀಕ್ಷಿಸಿದ ಅವರು ಮೈಕ್ ಸುವ್ಯವಸ್ಥೆ ಸೇರಿ ಇನ್ನಿತರ ಅಂಶಗಳನ್ನು ಪರಿಶೀಲಿಸಿದರು. ಆಡಳಿತ ಪಕ್ಷದ ಮೊಗಸಾಲೆ,ವಿರೋಧ ಪಕ್ಷದ ಮೊಗಸಾಲೆ, ಸಭಾಧ್ಯಕ್ಷರ ಸಭಾಪತಿಗಳ ಕೊಠಡಿ, ಮುಖ್ಯಮಂತ್ರಿಗಳ ಕೊಠಡಿ,ವಿರೋಧಪಕ್ಷದ ನಾಯಕರ ಕೊಠಡಿಯನ್ನು ಪರಿಶೀಲಿಸಿದರು.