ಹಿರೇಮಸಳಿ ಶಾಲೆಯ ಶಿಕ್ಷಕಿಗೆ ಸಂದ ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ
ಇಂಡಿ : ಮಾತೆ ಸಾವಿತ್ರಿಬಾಯಿ ಪುಲೆ ಶಿಕ್ಷಕರ ಸಂಘ ವಿಜಯಪುರದಿಂದ ಕೊಡಮಾಡುವ ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಶಿಕ್ಷಕಿ ಶ್ರೀಮತಿ ಆರ್ ಟಿ ತಳವಾರ ಅಭಿನಂದನೆ ಸಲ್ಲಿಸಿದರು.
ತಾಲ್ಲೂಕಿನ ಹಿರೇಮಸಳಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತ್ತೀರುವ ಆರ್ ಟಿ ತಳವಾರ ಅವರು ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪಡೆದಿದ್ದು ನಮ್ಮ ಶಾಲೆ ಮತ್ತು ಗ್ರಾಮದ ಕೀರ್ತಿ ಹೆಚ್ಚಿಸಿದ್ದಾರೆ ಎಂದು ಶಾಲೆಯ ಮುಖ್ಯ ಗುರು ಆನಂದ ಕೆಂಭಾವಿ ಹೇಳಿದರು.
ಇದೇ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕ /ಶಿಕ್ಷಕಿಯರು ಮತ್ತು ಎಸ್ ಡಿ ಎಂ ಸಿ ಅಧ್ಯಕ್ಷರು, ಸರ್ವ ಸದಸ್ಯರು ಮತ್ತು ಹಿರೇಮಸಳಿ ಗ್ರಾಮಸ್ತರು ಅಭಿನಂದಿಸಿದ್ದಾರೆ.