ಇಂಡಿ : ಭಾರೀ ಮಳೆ, ಗಾಳಿಗೆ ಕಾರ್ಖಾನೆಯ ಗೋಡಾವನಗಳ ಮೇಲ್ಛಾವಣಿ ಕುಸಿದು ಬಿದ್ದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿರುವ ಶ್ರೀ ಭೀಮಾ ಶಂಕರ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ. ಇನ್ನು ಕಳೆದ ಎರಡು ದಿನಗಳಿಂದ ಬಿಟ್ಟು ಬಿಡದೇ ಮಳೆ, ಗಾಳಿಯಿಂದ ಗೋಡವಾನಗಳ ಮೇಲ್ಚಾವಣಿಯಲ್ಲಿ ನೆಲಕ್ಕೆ ಬಿದ್ದಿದ್ದು, ಆದ್ರೇ, ಯಾವುದೇ ಪ್ರಾಣ ಹಾನಿಯಾಗಿಲ್ಲ. ಆದ್ರೇ, ಕಾರ್ಖಾನೆಗೆ ದೊಡ್ಡ ಪ್ರಮಾಣದಲ್ಲಿ ನಷ್ಟವಾಗಿದೆ. ಅದಕ್ಕಾಗಿ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಕಾರ್ಖಾನೆಯವರು ಮನವಿ ಮಾಡಿಕೊಂಡಿದ್ದಾರೆ.