ಅ -2 ರಂದು ಇಂಡಿಯಲ್ಲಿ ಕಾಂಗ್ರೆಸ್‌ನಿಂದ ಬೃಹತ್ ಪಾದಯಾತ್ರೆ..!
ಇಂಡಿ : ಮಹಾತ್ಮ ಗಾಂಧಿಯವರು ಕಾಂಗ್ರೆಸ್ನ ನಾಯಕತ್ವ ವಹಿಸಿಕೊಂಡು 100 ವರ್ಷಗಳಾದವು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯಾದ್ಯಂತ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅದರಂತೆ ಪಟ್ಟಣದ ಮಹಾತ್ಮ ಗಾಂಧಿ ಚೌಕ ನಿಂದ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಜಾವೀದ್ ಮೋಮಿನ್ ಹೇಳಿದರು.
ಮಂಗಳವಾರ ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸುದ್ದಿಗೊಷ್ಠಿ ಉದ್ದೇಶಿಸಿ ಮಾತಾನಾಡಿದ ಅವರು, ಅಕ್ಟೋಬರ್ 2 ಗಾಂಧಿ ಜಯಂತಿ ನಿಮತ್ಯವಾಗಿ ಬೃಹತ್ ಪಾದಯಾತ್ರೆ ಬೆಳಿಗ್ಗೆ 8:30 ಕ್ಕೆ, ಪಟ್ಟಣದ ಕೇಂದ್ರಸ್ಥಾನ ಗಾಂಧಿ ಚೌಕನಿಂದ ಕಾಂಗ್ರೆಸ್ ಕಾರ್ಯಾಲಯದವರೆಗೆ ಶಾಸಕ ಯಶವಂತರಾಯಗೌಡ ಪಾಟೀಲ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಪಕ್ಷದ ಕಾರ್ಯಕರ್ತರು, ಮುಖಂಡರು , ಹಾಲಿ ಮತ್ತು ಮಾಜಿ ತಾ.ಪಂ, ಜಿಪಂ ಸದಸ್ಯರು ಸೇರಿದಂತೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೆ ಸಾಕ್ಷಿಯಾಬೇಕು ಎಂದು ಹೇಳಿದರು.