Voice Of Janata DesK News : ನವದೆಹಲಿ ಫೆಬ್ರವರಿ 3: ಭಾರತೀಯ ಜನತಾ ಪಕ್ಷದ ಧೀಮಂತ ನಾಯಕ ಮತ್ತು ಮಾಜಿ ಉಪ ಪ್ರಧಾನಿ ಲಾಲ್ ಕಿಶನ್ ಅಡ್ವಾಣಿ ಅವರಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಪ್ರಶಸ್ತಿ ನೀಡಲಾಗಿದೆ. ಇದನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಬಹಿರಂಗಪಡಿಸಿದ್ದಾರೆ.
ಎಲ್.ಕೆ ಅಡ್ವಾಣಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂದು ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ದೇಶದ ಅಭಿವೃದ್ಧಿಗೆ ಎಲ್.ಕೆ ಅಡ್ವಾಣಿ ಅವರ ಕೊಡುಗೆ ಅಪಾರ ಎಂದು ಮೋದಿ ಅವರು ಟ್ವಿಟ್ಟರ್‌ನಲ್ಲಿ ಬರೆದಿದ್ದಾರೆ. ಜೊತೆಗೆ ಅಡ್ವಾಣಿ ಕೊಡುಗೆಯನ್ನು ಮೋದಿ ಅವರು ಶ್ಲಾಘಿಸಿದ್ದಾರೆ. ಈ ವಿಷಯ ಹಂಚಿಕೊಳ್ಳಲು ನನಗೆ ಖುಷಿ ಆಗಿದೆ. ಅವರೊಂದಿಗೆ ಅಭಿನಂದನೆ ಹಂಚಿಕೊಂಡಿದ್ದೇನೆ ಎಂದು ಮೋದಿ ಅವರು ಬರೆದಿದ್ದಾರೆ.
ದೇಶದ ರಾಜಕಾರಣದಲ್ಲಿ ಅಡ್ವಾಣಿ ಅವರ ಪ್ರಭಾವ ಸಾಕಷ್ಟಿದೆ ಎಂದು ಮೋದಿ ಹೇಳಿದ್ದಾರೆ. ಭಾರತದ ಅಭಿವೃದ್ಧಿಗೆ ಅಡ್ವಾಣಿ ಅವರ ಕೊಡುಗೆ ಸ್ಮರಣಿಯವಾದದ್ದು, ಅಡ್ವಾಣಿ ಅವರ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
”ಶ್ರೀ ಎಲ್ ಕೆ ಅಡ್ವಾಣಿ ಜಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂದು ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಕೂಡ ಅವರೊಂದಿಗೆ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ. ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಒಬ್ಬರು, ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಸ್ಮಾರಕವಾಗಿದೆ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ಉಪಪ್ರಧಾನಿಯಾಗಿ ದೇಶಸೇವೆ ಮಾಡುವವರೆಗಿನ ಜೀವನ ಅವರದು. ಅವರು ನಮ್ಮ ಗೃಹ ಮಂತ್ರಿ ಮತ್ತು I&B ಸಚಿವರಾಗಿಯೂ ಗುರುತಿಸಿಕೊಂಡರು. ಅವರ ಸಂಸದೀಯ ಮಧ್ಯಸ್ಥಿಕೆಗಳು ಯಾವಾಗಲೂ ಆದರ್ಶಪ್ರಾಯವಾಗಿವೆ” ಎಂದು ಪ್ರಧಾನಿ ಮೋದಿ ಅವರು ತಮ್ಮ ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.