ಸಿಂದಗಿ : ಕೇಂದ್ರ ಸರ್ಕಾರ ಎಸ್‌ಟಿ ಪ್ರಮಾಣ ಪತ್ರ ನೀಡಲು ಆದೇಶ ಹೊರಡಿಸಿದರೂ ರಾಜ್ಯ ಸರ್ಕಾರ ಪಾಲಿಸದೇ ಇರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಬಿಜೆಪಿ ವಿರುದ್ಧ ತಳವಾರ ಪರಿವಾರ ಹಿತರಕ್ಷಣಾ ಸಮಿತಿ ಹಾಗೂ ಅಹಿಂದ ಸಂಘಟನಾ ಒಕ್ಕೂಟದವರು ತಿರುಗಿ ಬಿದ್ದು ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಅರೆ ಬೆತ್ತಲೆ ಮೆರವಣಿಗೆ ಮಾಡಿದರು.
ಪಟ್ಟಣದ ಅಂಬೇಡ್ಕರ್ ಸರ್ಕಲ್ ದಿಂದ ತಹಶೀಲ್ದಾರ ಕಚೇರಿ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು. ಇನ್ನು ಸರ್ಕಾರ ಸಿಂದಗಿ ಉಪ ಚುನಾವಣೆಯಲ್ಲಿ ತಳವಾರ ಮತಗಳೇ ನಿರ್ಣಾಯಕವಾಗಿದ್ದವು. ಈ ಸಮುದಾಯದ ಮತಗಳಿಂದಲೇ ಸಿಂದಗಿ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ಸಾಧ್ಯವಾಗಿದ್ದು. ಇದೀಗ ಆ ಋಣ ಮರೆತಿರುವ ಬಿಜೆಪಿಗೆ ಮುಂಬರುವ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವುದು ಅನಿವಾರ್ಯವಾಗುತ್ತದೆ ಎಂದು ಮುಖಂಡರು ಆಕ್ರೋಶ ಹೊರಹಾಕುತ್ತಿದ್ದಾರೆ. ಇದೀಗ ಪ್ರಮಾಣ ಪತ್ರ ನೀಡಲಿಲ್ಲ ಅಂದ್ರೇ ಬರುವ ವಿಧಾನಸಭಾ ಚುನಾವಣೆಯಲ್ಲಿ ಯಮರಾಜ ವೇಷದಲ್ಲಿ ಆಗಮಿಸಿ ಸರ್ಕಾರಕ್ಕೆ ಕಾಡುತ್ತೇವೆ ಎಂದು ಕಿಡಿಕಾರಿದರು. ಅದಕ್ಕಾಗಿ ತಕ್ಷಣವೇ ಪ್ರಮಾಣ ಪತ್ರ ನೀಡಬೇಕು ಎಂದು ತಹಶೀಲ್ದಾರಗೆ ಮನವಿ ಸಲ್ಲಿಸಿದರು.