ಲಿಂಗಸೂಗೂರು: ರಾಯಚೂರ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಕಾಂಗ್ರೆಸ್ ಶಾಸಕ ಡಿ.ಎಸ್.ಹೂಲಗೇರಿ ಯವರ ಸಮ್ಮುಖದಲ್ಲಿ ಇಪ್ಪತ್ತಕ್ಕೂ ಹೆಚ್ಚು ಜನರು ಶಾಸಕರ ಕಾರ್ಯಾಲಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ತಾಲೂಕಿನ ಜಂಗೀರಾಂಪೂರ ತಾಂಡಾದ 20 ಕ್ಕೂ ಹೆಚ್ಚು ಜನರು ಬಿಜೆಪಿ ಮತ್ತು ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ. ಈ ವೇಳೆ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಭೂಪನಗೌಡ ಪಾಟೀಲ್, ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಬಸನಗೌಡ ಕಂಬಳಿ, ದೀರು ನಾಯಕ್, ವಾಸು ನಾಯಕ್, ಪಿ.ಜಿ.ಪವಾರ, ಲಿಂಬಪ್ಪ, ಕೃಷ್ಣಪ್ಪ, ಖೀರಪ್ಪ, ರೆಡ್ಡೆಪ್ಪ, ದೇನಪ್ಪ, ಆವಜಪ್ಪ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.