ಇಂಡಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ..!
ಇಂಡಿ: ರಾಜ್ಯದಲ್ಲಿ ಗತ ವೈಭವವನ್ನು ತರುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಮತ್ತೊಮ್ಮೆ ಬಿಜೆಪಿ ಸರಕಾರವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರಲು ಶ್ರಮಿಸಬೇಕಾಗಿದೆ ಎಂದು ಬಿಜೆಪಿ ಜಿಲ್ಲಾ ಸಂಯೋಜಕ ಮಲ್ಲಿಕಾರ್ಜುನ ಜೋಗೂರ ಹೇಳಿದರು.
ಶುಕ್ರವಾರ ಪಟ್ಟಣದ ಸಿಂದಗಿ ರಸ್ತೆಯ ಶಾಂತೇಶ್ವರ ಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಬಿಜೆಪಿ ಸದಸ್ಯತ್ವ ಅಭಿಯಾನ, ಇಂಡಿ ಮಂಡಲ ಕಾರ್ಯಾಗಾರ ಕರ‍್ಯಕ್ರಮದಲ್ಲಿ ಅವರು ಮಾತನಾಡಿದರು.
ಬಿಜೆಪಿ ವಿಶ್ವದಲ್ಲೇ ಅತ್ಯಂತ ದೊಡ್ಡ ರಾಜಕೀಯ ಪಕ್ಷವಾಗಿ ಗುರುತಿಸಿಕೊಂಡು ಅತಿ ವೇಗವಾಗಿ ದೇಶದಲ್ಲಿ ಬೆಳೆಯುತ್ತಿದೆ. ಪ್ರತಿಯೊಬ್ಬರು ಸಮರ್ಪಣಾ ಭಾವದಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕಿದೆ ಎಂದರು.
ಜಿಲ್ಲಾ ಬಿಜೆಪಿ ರೈತ ಮೋರ್ಚಾ ಮಾಜಿ ಅಧ್ಯಕ್ಷ ಕಾಸುಗೌಡ ಬಿರಾದಾರ ಮಾತನಾಡಿ, ಬಿಜೆಪಿ ಸದಸ್ಯತ್ವ ಅಭಿಯಾನ ಸೆ. ೨ ರಂದು ಆರಂಭಗೊಂಡು ೧೭ ರ ವರೆಗೆ ನಡೆಯಲಿದ್ದು ೨ ರಂದು ದೇಶದ್ಯಾದಂತ ನಡೆಯುವ ಸದಸ್ಯತ್ವ ನೊಂದಣ ಕರ‍್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಹಾಗೂ ರಾಷ್ಟೀಯ ಅಧ್ಯಕ್ಷ ಜೆ.ಪಿ ನಡ್ಡಾ ಚಾಲನೆ ನೀಡಿದ್ದಾರೆ. ಬಿಜೆಪಿ ಪಕ್ಷವನ್ನು ಮತಷ್ಟು ಬಲ ಪಡಿಸುವ ಉದ್ದೇಶದಿಂದ ೫ ವರ್ಷಕ್ಕೊಮ್ಮೆ ಸದಸ್ಯತ್ವ ಅಭಿಯಾನ ನಡೆಸಲಾಗುತ್ತಿದೆ ಎಂದರು.
ಶಂಕರಗೌಡ ಪಾಟೀಲ ಮಾತನಾಡಿ, ಪಕ್ಷದ ಬಲವರ್ಧನೆಗೆ ದುಡಿದ ಕರ‍್ಯಕರ್ತರನ್ನು ಗುರುತಿಸಿ ಸೂಕ್ತ ಸ್ಥಾನಮಾನ ನೀಡಲಾಗುವದು. ಕ್ಷೇತ್ರ ವ್ಯಾಪ್ತಿಯಲ್ಲಿ ಬುತ್ ವ್ಯಾಪ್ತಿಯಲ್ಲಿ ಸದಸ್ಯತ್ವ ಮಾಡಿಸುವ ನಿಟ್ಟಿನಲ್ಲಿ ಕರ‍್ಯಕರ್ತರು ಕಾರ್ಯೋನ್ಮುಖರಾಗಬೇಕು ಎಂದರು.
ಶೀಲವಂತ ಉಮರಾಣ ಮಾತನಾಡಿ, ಪಕ್ಷ ಸಂಘಟನೆಗೆ ಒಂದು ಅವಕಾಶ ದೊರಕ್ಕಿದ್ದು ಜನ ಪ್ರತಿನಿಧಿಗಳು ಮುಖಂಡರು ಹಾಗೂ ಕಾರ್ಯಕರ್ತರು ಸದುಪಯೋಗ ಪಡಿಸಿಕೊಂಡು ಪಕ್ಷವನ್ನು ಬಲಗೊಳಿಸಬೇಕಿದೆ. ವಿಧಾನಸಭೆ ಕ್ಷೇತ್ರದಲ್ಲಿ ಸದಸ್ಯತ್ವ ಅಭಿಯಾನಕ್ಕೆ ಸಕ್ರೀಯವಾಗಿ ಭಾಗವಹಿಸಿ ಸದಸ್ಯತ್ವ ಅಭಿಯಾನ ಯಶಸ್ವಿಗೊಳಿಸಬೇಕು ಎಂದರು.
ಮಲ್ಲಿಕಾರ್ಜುನ ಕಿವುಡೆ, ದೇವೆಂದ್ರ ಕುಂಬಾರ, ಅನೀಲ ಜಮಾದಾರ, ಮಾತನಾಡಿದರು.
ವೇದಿಕೆಯಲ್ಲಿ ಹಣಮಂತಗೌಡ ಪಾಟೀಲ, ಸಿದ್ದಲಿಂಗ ಹಂಜಗಿ, ಮುತ್ತು ದೇಸಾಯಿ, ರಾಜಕುಮಾರ ಸಗಾಯಿ, ರವಿ ವಗ್ಗೆ, ಮಹಾದೇವ ರಜಪೂತ ಮತ್ತಿತರಿದ್ದರು.
ಇಂಡಿ: ಪಟ್ಟಣದ ಸಿಂದಗಿ ರಸ್ತೆಯ ಶಾಂತೇಶ್ವರ ಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಬಿಜೆಪಿ ಸದಸ್ಯತ್ವ ಅಭಿಯಾನ, ಇಂಡಿ ಮಂಡಲ ಕಾರ್ಯಾಗಾರ ಕರ‍್ಯಕ್ರಮದಲ್ಲಿ ಮಲ್ಲಿಕಾರ್ಜುನ ಜೋಗೂರ ಮಾತನಾಡಿದರು