ವಿಜಯಪುರ: ಕಮಲ (BJP) ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ವಿಜಯಪುರ ನಗರದಲ್ಲಿ ಮಾಧ್ಯಮದ ಎದುರು ಮಾತನಾಡಿದ ಅವರು, ನನಗೆ ಭೇಟಿ ಆಗುವ ನಾಟಕ ಮಾಡುವುದು ಬೇಡ. ಎಲ್ಲವೂ ಸರಿಯಾಗಿದೆ ಎಂದು ಹೇಳಿ ಹೋಗುವುದು ಬೇಡ. ವಿಜಯೇಂದ್ರ ಮೊದಲು ಏನೇನು ನನಗೆ ಅಡೆತಡೆಗಳನ್ನು ಮಾಡಿದ್ದು, ನನಗೆ ಗೊತ್ತಿದೆ. ವಿಜಯಪುರ ಜಿಲ್ಲೆಗೆ ಬರುವ ಅನುದಾನವನ್ನು ವಾಪಸ್ಸು ಪಡೆದಿದ್ದಾರೆ. ಈಗ ಸರಿ ಮಾಡೋಣ ಅಂದ್ರೆ ಆಗಲ್ಲ. ಲೋಕಸಭಾ ಚುನಾವಣೆ ಮುಗಿದ ನಂತರ ಎಲ್ಲಾ ನಿರ್ಧಾರ ಆಗುತ್ತದೆ ಎಂದು ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಹೈಕಮಾಂಡ್ ಆಯ್ಕೆ ಮಾಡಿದ ಬಳಿಕ ಹಿರಿಯ ನಾಯಕರುಗಳು ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ.