ಸಿಂಧನೂರು: ದಿದ್ದಿಗಿ ಸರಕಾರಿ ಪ್ರೌಢ ಶಾಲೆಗೆ ಎಸ್ಪಿ ನಿಖಿಲ್ ಬಿ ಭೇಟಿ ನೀಡಿ ಶಾಲಾ ಆವರಣದಲ್ಲಿ ಸಸಿ ನೆಟ್ಟು ಮಕ್ಕಳಿಗೆ ನೋಟ್ಬುಕ್ ಹಾಗೂ ಪೆನ್ ನೀಡಿ ಚೆನ್ನಾಗಿ ವಿದ್ಯಾಭ್ಯಾಸ ಮಾಡುವಂತೆ ಮಕ್ಕಳಿಗೆ ತಿಳಿ ಹೇಳಿದರು.
ಅಲ್ಲದೆ ಪರಿಸರ ಸಂರಕ್ಷಣೆ ಮಾಡಿ, ಸಸಿಗಳನ್ನು ನೆಟ್ಟು ಅವುಗಳ ರಕ್ಷಣೆ ಮಾಡಿ ಮರವನ್ನಾಗಿ ಬೆಳೆಸಿ ಪ್ರಕೃತಿ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು.
ಇನ್ನು ವಿಧ್ಯಾರ್ಥಿಗಳು ಯಾವುದೇ ರೀತಿಯ ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ರೀತಿಯ ಜೀವನ ರೂಪಿಸಿಕೊಳ್ಳಿ ಎಂದರು. ನಂತರ ಮಕ್ಕಳೊಂದಿಗೆ ಬಿಸಿ ಊಟ ಮಾಡಿ ಖುಷಿ ಹಂಚಿಕೊಂಡರು.
ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು, ಗ್ರಾಮಸ್ಥರು, ಶಾಲೆಯ ಶಿಕ್ಷಕರು ಪ್ರಕೃತಿ ಫೌಂಡೇಶನ್ ಸಂಸ್ಥಾಪಕ ಶಿವಮೂರ್ತಿ ಗದ್ಗಿಮಠ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.