ಬೆಳ್ಳಂಬೆಳಗ್ಗೆ ಎಲೆಕ್ಟ್ರಿಕ್ ಬೈಕ್ ಸವಾರನಿಗೆ ದೊಡ್ಡ ಶಾಕ್..!
ಮನೆ ಮುಂದೆ ನಿಲ್ಲಿಸಿದ್ದ ಎಲೆಕ್ಟ್ರಿಕ್ ಬೈಕ್ ಬೆಂಕಿಗಾಹುತಿ..!
ಚಾಮರಾಜನಗರ : ಎಲೆಕ್ಟ್ರಿಕ್ ಬೈಕ್ ಸ್ಟಾರ್ಟ್ ಮಾಡಿದ ವೇಳೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಧಗಧಗನೇ ಹೊತ್ತಿ ಉರಿದ ಘಟನೆ ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಕೊತ್ತಲವಾಡಿ ಗ್ರಾಮದ ಬಸವರಾಜಪ್ಪ ಎಂಬುವರಿಗೆ ಸೇರಿದ ಬೈಕ್ ಇದಾಗಿದ್ದು, ಚಾರ್ಜ್ ಆದ ಬಳಿಕ ಬೈಕ್ ಸ್ಟಾರ್ಟ್ ಮಾಡಿದ ವೇಳೆ ಹೊಗೆ ಕಾಣಿಸಿಕೊಂಡಿದೆ ಎಂದು ಅವರು ತಿಳಿಸಿದ್ದಾರೆ. ಹೊಗೆ ಕಂಡು ಆತಂಕದಿಂದ ಹಿಂದೆ ಸರಿದಿದ್ದು, ಕ್ಷಣಾರ್ಧದಲ್ಲೇ ದಿಢೀರ್ ಬೆಂಕಿಯ ಜ್ವಾಲೆ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಅದೃಷ್ಟವಶಾತ್ ಪಕ್ಕದಲ್ಲೇ ನಿಲ್ಲಿಸಿದ್ದ ಮತ್ತೊಂದು ಬೈಕ್ ಹಾಗೂ ಮನೆಗೆ ಬೆಂಕಿ ವ್ಯಾಪಿಸಿಲ್ಲ. ಕೂಡಲೇ, ಕೆಲ ಯುವಕರು ಸೇರಿ ಉರಿಯುತ್ತಿದ್ದ ಬೈಕ್ಗೆ ನೀರು ಹಾಯಿಸಿ ಬೆಂಕಿ ನಂದಿಸಿದ್ದಾರೆ. ಬೆಳ್ಳಂಬೆಳಗ್ಗೆ ಎಲೆಕ್ಟ್ರಿಕ್ ಬೈಕ್ ಸವಾರನಿಗೆ ದೊಡ್ಡ ಶಾಕ್ ಕೊಟ್ಟಿದೆ. ಇನ್ನೂ ಏಕಾಏಕಿ ಹೊತ್ತಿ ಉರಿದ ಎಲೆಕ್ಟ್ರಿಕಲ್ ದ್ವಿಚಕ್ರ ವಾಹನದಿಂದ ಗ್ರಾಮಸ್ಥರು ಭಯ ಬೀತರಾಗಿದ್ದಾರೆ.