ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮದಿಂದ
ವಿವಿಧ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನ
ವಿಜಯಪುರ, ಆಗಸ್ಟ್ 19 : ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ಸಾಲ, ಅರಿವು ಶೈಕ್ಷಣಿಕ ಸಾಲ ಯೋಜನೆ(ಹೊಸದು), ಅರಿವು ಶೈಕ್ಷಣಿಕ ಸಾಲ ಯೋಜನೆ(ನವೀಕರಣ), ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲಿಚ್ಚಿಸುವವರು ಸೇವಾ ಸಿಂಧು ಮೂಲಕ, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರ, ಅಟಲ್‍ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : 16-09-2024 ಕೊನೆಯ ದಿನಾಂಕವಾಗಿದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್https://www.upparadevelopment.karnataka.gov.in ಅಥವಾ ನಿಗಮದ ಸಹಾಯವಾಣಿ 080-2252555 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.