ವಿಜಯಪುರ: ಕಾರಿಗೆ ಬೈಕ್ ಡಿಕ್ಕಿಯಾಗಿರುವ ಪರಿಣಾಮ ಶಿಕ್ಷಕನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಕೋಮಲ್ ಡಾಬಾ ಹತ್ತಿರ ನಡೆದಿದೆ.
ಶಿಕ್ಷಕ ಮಹೇಶ ಕಿತ್ತೂರ ಗಂಭೀರ ಗಾಯಗೊಂಡಿದ್ದು, ತೀವ್ರ ರಕ್ತಸ್ರಾವದಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಅಪಘಾತದಲ್ಲಿ ಕೈ ಮತ್ತು ತೊಡೆಯ ಮೂಳೆ ಮುರಿದಿದೆ ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.