ಕೋಲ್ಹಾರ : ಬೈಕ್ ಸ್ಕಿಡ್ ಆಗಿ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಕೂಡಗಿ ತಾಂಡಾ ಬಳಿ ನಡೆದಿದೆ. ಸುನೀಲ್ ರಾಠೋಡ್ (27) ಸ್ಥಳದಲ್ಲೇ ಅಸುನೀಗಿರುವ ಬೈಕ್ ಸವಾರ. ಬೈಕ್ ಅಪಘಾತಕ್ಕೆ ಅತೀ ವೇಗವೇ ಕಾರಣವಾಗಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಮೃತನ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಕೂಡಗಿ ಎನ್ ಟಿ ಪಿ ಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.