ಲಿಂಗಸೂಗೂರು: ರಾಜ್ಯದ ವಿವಿಧ ಭಾಗಗಳಲ್ಲಿ ಮನೆ ಮುಂದೆ ನಿಲ್ಲಸಿದ ಬೈಕ್ಗಳನ್ನು ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ನ್ನು ಮುದಗಲ್ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ರಾಯಚೂರ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ನಾಗರಹಾಳ ಗ್ರಾಮದ ರ್ಯಾಂಬೋ ಬಾಯ್ಸ್ ತಂಡದ ಈಶ್ವರ ಸ್ವಾಮಿ, ಹನಮಂತ, ಮಹಿಬೂಬ್, ಬಸವರಾಜ್, ಮುತ್ತುರಾಜ, ಸಂಗಪ್ಪ ಎನ್ನುವ ಆರು ಜನರು ಬಂಧಿತ ಆರೋಪಿಗಳಾಗಿದ್ದು, ಆರೋಪಿಗಳಿಂದ 5 ಲಕ್ಷ ಬೆಲೆ ಬಾಳುವ 10 ಮೋಟಾರ್ ಬೈಕ್ಗಳನ್ನು ವಶಕ್ಕೆ ಪಡೆಯಲಾಗಿದೆ.
ಅಲ್ಲದೆ ಇನ್ನು 5 ಜನ ಆರೋಪಿಗಳು ತಲೆ ಮರೆಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿದೆ. ಆದಷ್ಟು ಬೇಗನೆ ಇನ್ನುಳಿದ ಆರೋಪಿಗಳನ್ನು ಬಂಧಿಸಲಾಗುವದು ಎಂದು ಲಿಂಗಸೂಗೂರು DySP ಎಸ್. ಮಂಜುನಾಥ ಹೇಳಿದರು.
ಇನ್ನು ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ ಮುದಗಲ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸೆ ವ್ಯಕ್ತ ಪಡಿಸಿದ್ದಾರೆ.