ವಿಭಾಗೀಯ ಸಂಘಟನಾ ಕಾರ್ಯದರ್ಶಿಯಾಗಿ ಎಸ್ ಆರ್ ಪಾಟೀಲ ಆಯ್ಕೆ..
ಇಂಡಿ : ತಾಲೂಕು ಸರಕಾರಿ ನೌಕರ ಸಂಘದ ನಿಕಟಪೂರ್ವ ಅಧ್ಯಕ್ಷ ಹಾಗೂ ತಾಲೂಕಿನ ಮಾವಿನಹಳ್ಳಿ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಶಂಕರಗೌಡ ಪಾಟೀಲ ಅವರನ್ನು ನಾಮನಿರ್ದೇಶನ ಮೇರೆಗೆ ವಿಭಾಗೀಯ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ಅಧ್ಯಕ್ಷ ಸಿ ಎಸ್ ಷಡಾಕ್ಷರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.