ಉಚಿತ ಕಣ್ಣಿನ ತಪಾಸಣೆ-ಶಸ್ತ್ರ ಚಿಕಿತ್ಸೆ ಸದುಪಯೋಗಕ್ಕೆ ಕರೆ
ವಿಜಯಪುರ : ಜಿಲ್ಲೆಯಲ್ಲಿನ ಎಲ್ಲ ಅನುದಾನಿತ ಹಾಗೂ ಸರ್ಕಾರಿ ಶಾಲೆಯ ಮಕ್ಕಳಿಗೆ ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆ, ಶಿಕ್ಷಣ ಮತ್ತು ಆರೋಗ್ಯ ಇಲಾಖೆ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ದೃಷ್ಟಿದೋಷ ಇರುವ ಮಕ್ಕಳಿಗೆ ಕನ್ನಡಕ ಹಾಗೂ ಶಸ್ತç ಚಿಕಿತ್ಸಾ ಸೌಲಭ್ಯ ಒದಗಿಸಲಾಗುತ್ತಿದ್ದು, ಶಾಲಾ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಕರೆ ನೀಡಿದ್ದಾರೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಲ್ಲಿ ಹಮ್ಮಿಕೊಂಡ ನೇತ್ರ ತಪಾಸಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರಿ ಮಾತನಾಡಿ, ಜಿಲ್ಲೆಯ ೨೨೭೪ ಶಾಲೆಗಳ ೩೨೫೦೦೭ ಮಕ್ಕಳ ನೇತ್ರ ತಪಾಸಣೆ ನಡೆಸಿ, ೯೭೭೫ ಮಕ್ಕಳಿಗೆ ಉಚಿತವಾಗಿ ಕನ್ನಡಕ ವಿತರಿಸಲಾಗಿದೆ ಹಾಗೂ ೮೭ ಶಾಲಾ ಮಕ್ಕಳ ನೇತ್ರ ಶಸ್ತç ಚಿಕಿತ್ಸೆ ಮಾಡಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಅಂಧತ್ವ ನಿವಾರಣಾ ಅಧಿಕಾರಿ ಡಾ.ಅರ್ಚನಾ ಕುಲಕರ್ಣಿ, ಶಂಕರ ಕಣ್ಣಿನ ಆಸ್ಪತ್ರೆಯ ಡಾ.ದೀಶಾ, ಡಾ.ಅಮೃತಾ, ಪರಮೇಶ್ವರ ರಡ್ಡಿ ಹಾಗೂ ಸಿಬ್ಬಂದಿಗಳು, ಡಾ.ಮೀನಾಕ್ಷಿ ಸೊನ್ನದ, ಆರ್.ಸಿ.ಹೆಚ್ ಅಧಿಕಾರಿ ಡಾ.ಪರಶುರಾಮ ಹಿಟ್ನಳ್ಳಿ, ತಾಲೂಕಾ ಆರೋಗ್ಯಾಧಿಕಾರಿ ಡಾ.ಕೆ.ಡಿ.ಗುಂಡಬಾವಡಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಎಂ.ಕೋಲೂರ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಮಹಾದೇವ ನೀಲಂಗಿ, ನೇತ್ರ ಸಹಾಯಕರಾದ ಶ್ರೀಮತಿ ಸಾವಿತ್ರಿ ಪತ್ತಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.



















