ವಿಜಯಪುರ : ಅಧಿಕಾರ ವಹಿಸಿಕೊಳ್ಳಲು ಹೊರಟಿದ್ದ ನೂತನ ವಿಜಯಪುರ ಜಿಲ್ಲಾಧಿಕಾರಿ ಹಾಗೂ ಕುಟುಂಬದ ಕಾರ್ ಪಲ್ಟಿಯಾದ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪದ ಬಳಿ ಸಂಭವಿಸಿದೆ. ಆದ್ರೇ, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇನ್ನು ಐಎಎಸ್ ಅಧಿಕಾರಿ ವಿಜಯಮಹಾಂತೇಶ ದಾನಮ್ಮನವರ, ಪತ್ನಿ ಶ್ವೇತಾ, ಮಕ್ಕಳಾದ ತನ್ವಿ, ವಿಹಾನ್ ಹಾಗೂ ಪ್ರವಿಣಕುಮಾರ ಕಾರಿನಲ್ಲಿದ್ದವರು. ಸದ್ಯ ಎಲ್ಲರನ್ನೂ ಎಸ್ ಡಿ ಎಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದಾನಮ್ಮನವರ ಅವರ ವರ್ಗಾವಣೆ ಆದೇಶ ನಿನ್ನೆಯಷ್ಟೇ ಬಂದಿತ್ತು. ವಿಜಯಪುರ ಜಿಲ್ಲಾಧಿಕಾರಿಯಾಗಲು ಹೊರಟಿದ್ದ ಸಮಯದಲ್ಲಿಯೇ ಈ ದುರ್ಘಟನೆ ನಡೆದಿದೆ.