ಕಾರು ಹಾಗೂ ಬೈಕ್ ನಡುವೆ ಅಪಘಾತ: ಉದಯವಾಣಿ ವರದಿಗಾರ ವಿನೋದ್ ವಿಧಿವಶ
ಹನೂರು: ತಾಲೂಕಿನ ಉದಯವಾಣಿ ಪತ್ರಿಕೆ ವರದಿಗಾರ ವಿನೋದ್ ಅವರು ರಸ್ತೆ ಅಪಘಾತದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗಿದೆ ವಿಧಿವಶರಾಗಿದ್ದಾರೆ. ಹನೂರು ಪಟ್ಟಣದ ನಿವಾಸಿ ಲಿಂಗರಾಜು ಮತ್ತು ಲಕ್ಷ್ಮಮ್ಮ ದಂಪತಿಯ ಪುತ್ರರಾದ ವಿನೋದ್ ಅವರು ಹನೂರು ತಾಲೂಕಿನ ಉದಯವಾಣಿ ಪತ್ರಿಕೆ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಘಟನೆಯ ವಿವರ
ಮೈಸೂರು : ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ತೀವ್ರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ನರಸೀಪುರ ರಸ್ತೆಯ ರಿಂಗ್ ರೋಡ್ ಜಂಕ್ಷನ್‌ನಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ.ವಿನೋದ್ ಅವರು ಭಾನುವಾರ ರಾತ್ರಿ ಸ್ಕೂಟರ್‌ನಲ್ಲಿ ರಿಂಗ್ ರಸ್ತೆಯಿಂದ ನಗರದ ಕಡೆ ತಿರುವು ಪಡೆಯುತ್ತಿದ್ದಾಗ ಎದುರಿಗೆ ಬಂದ ಕಾರು ಡಿಕ್ಕಿ ಹೊಡೆದಿದೆ.
ಅಪಘಾತದದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಸಿದ್ದಾರ್ಥ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರು ತಂದೆ ಲಿಂಗರಾಜು ತಾಯಿ ಲಕ್ಷ್ಮಮ್ಮ ಹಾಗೂ ತಮ್ಮ ಹೆಂಡತಿ ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಸ್ನೇಹಿತರ ವರ್ಗವನ್ನು ಅಗಲಿದ್ದಾರೆ. ಮಂಗಳವಾರ ಹನೂರಿನ ಒಕ್ಕಲಿಗ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿತು.
ವರದಿ:ಚೇತನ್ ಕುಮಾರ್ ಎಲ್, ಹನೂರು ತಾಲೂಕು, ಚಾಮರಾಜನಗರ ಜಿಲ್ಲೆ..