ಇಂಡಿ : ವೇಗವಾಗಿ ಹೋಗುತ್ತಿದ್ದ ವೇಳೆಯಲ್ಲಿ ಕಾರ್ ಟೈಯರ್ ಬ್ಲಾಸ್ಟ್ ಆಗಿರುವ ಪರಿಣಾಮ ತಡೆಗೋಡೆಗೆ ಡಿಕ್ಕಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಗುಂದವಾನ ಗ್ರಾಮದ ಡಾಬಾ ಬಳಿ ನಡೆದಿದೆ. ಇನ್ನು ಅಪಘಾತದಲ್ಲಿ ಕಾರ್ ಚಾಲಕನ ಗಂಭೀರವಾಗಿ ಗಾಯಗೊಂಡಿದ್ದಾನೆ. ಆದ್ರೇ, ಯಾವುದೇ ಪ್ರಾಣ ಹಾನಿಯಾಗಿಲ್ಲ. ಅಲ್ಲದೇ, ಕಾರ್ ಸಂಪೂರ್ಣವಾಗಿ ಜಖಂಗೊಂಡಿದೆ. ಗಾಯಗೊಂಡಿರುವ ಚಾಲಕನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಝಳಕಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.